ಮಂಗಳೂರು: ಸುರತ್ಕಲ್ ಎನ್‌ಐಟಿಕೆ ಸಮೀಪ ಬೈಕ್‌ಗೆ ನಾಯಿಯನ್ನು ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಕೊಪ್ಪಳ ಜಿಲ್ಲೆ ನಿವಾಸಿ ನೀಲಪ್ಪ(30) ಎಂಬಾತನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಏ.15ರಂದು ರಾತ್ರಿ ಸುರತ್ಕಲ್ ಎನ್‌ಐಟಿಕೆ ಬಳಿ ಬೈಕ್‌ನ ಹಿಂಬದಿಗೆ ಹಗ್ಗದಲ್ಲಿ ನಾಯಿಯನ್ನು ಕಟ್ಟಿ ಹಾಕಿ ಎಳೆದುಕೊಂಡು ಹೋಗುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಸುರತ್ಕಲ್ ಪೊಲೀಸರು ಸ್ವಯಂ ಆಗಿ ಕೇಸು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಬಂಧಿಸಲಾಗಿದ್ದು, ಇನ್ನೊಬ್ಬನಿಗೆ ಶೋಧ ನಡೆಯುತ್ತಿದೆ. ಆರೋಪಿ ನೀಲಪ್ಪ ವಿಚಾರಣೆ ವೇಳೆ ಸತ್ತಿತ್ತು, ಹಾಗಾಗಿ ಅದನ್ನು ಹೂಳಲು ಹೀಗೆ ತೆಗೆದುಕೊಂಡು ಹೋಗಿದ್ದಾಗಿ ಹೇಳಿದ್ದಾನೆ. ಒಂದು ವೇಳೆ ನಾಯಿ ಸತ್ತಿದ್ದರೂ ಈ ರೀತಿ ಅಮಾನವೀಯವಾಗಿ ಎಳೆದುಕೊಂಡು ಹೋಗುವಂತಿಲ್ಲಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾತ್ರಿ ವೇಳೆ ಬೈಕ್‌ನಲ್ಲಿದ್ದ ಇಬ್ಬರು ನಾಯಿಯನ್ನು ಹಗ್ಗದಲ್ಲಿ ಕಟ್ಟಿ ಎಳೆದುಕೊಂಡು ಹೋಗುತ್ತಿದ್ದರು. ಈ ವಿಡಿಯೋವನ್ನು ಪ್ರತ್ಯಕ್ಷದರ್ಶಿಯೊಬ್ಬರು ಚಿತ್ತೀಕರಿಸಿದ್ದು ನಂತರ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.ಈ ವಿಡಿಯೋಗೆ ಪ್ರಾಣಿ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
from India & World News in Kannada | VK Polls https://ift.tt/3dLRfa1