ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾಗೆ ಕೊರೊನಾ ಸೋಂಕು ದೃಢ!

ಹೊಸದಿಲ್ಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ಅವರಿಗೆ, ಮಾರಕ ಸೋಂಕು ತಗುಲಿದೆ. ಈ ಕುರಿತು ಟ್ವೀಟ್ ಮೂಲಕ ಖುದ್ದು ಮಾಹಿತಿ ನೀಡಿರುವ ರಣ್‌ದೀಪ್ ಸುರ್ಜೇವಾಲಾ, ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶ ಬಂದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ತಮಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿರುವುದರಿಂದ, ಕಳೆದ ಐದು ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ. ಅಲ್ಲದೇ ಸ್ವಯಂ ಕ್ವಾರಂಟೈನ್‌ಗೆ ಗುರಿಯಾಗಿ ಆರೋಗ್ಯದತ್ತ ಗಮನಹರಿಸಿ ಎಂದು ರಣದೀಪ್ ಸಿಂಗ್ ಸುರ್ಜೇವಾಲಾ ಮನವಿ ಮಾಡಿಕೊಂಡಿದ್ದಾರೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಮತ್ತು ಮೂರು ವಿಧಾನಸಭೆ ಉಪಚುನಾವಣೆ ನಿಮಿತ್ತ ರಾಜ್ಯದಲ್ಲಿ ಸಂಚರಿಸಿದ್ದ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಪ್ರಚಾರ ಸಭೆಗಳಲ್ಲಿ ಭಾಗಿಯಾಗಿದ್ದರು. ಸದ್ಯ ಕೊರೊನಾ ಸೋಂಕು ತಗುಲಿರುವ ರಣದೀಪ್ ಸಿಂಗ್ ಸುರ್ಜೇವಾಲಾ, ವೈದ್ಯರ ಸಲಹೆಯ ಮೇರೆಗೆ ಕ್ವಾರಂಟೈನ್‌ಗೆ ಗುರಿಯಾಗಿದ್ದು, ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ.


from India & World News in Kannada | VK Polls https://ift.tt/32hhv5B

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...