
: ಮಲಗುವ ವೇಳೆ ಕಿಟಕಿ ಪಕ್ಕದ ಮೇಜಿನ ಮೇಲಿಡುತ್ತಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದವನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ಮಲ್ಲಂಪೇಟೆಯ ಬಸವರಾಜು ಪ್ರಕಾಶ್ (33) ಬಂಧಿತನಾಗಿದ್ದು, ಆರೋಪಿಯಿಂದ 16.41 ಲಕ್ಷ ರೂ. ಮೌಲ್ಯದ 333.58 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ರಾತ್ರಿ ಮಲಗುವ ವೇಳೆ ತಾವು ಧರಿಸಿದ್ದ ಚಿನ್ನದ ಸರ ತೆಗೆದು ಕಿಟಕಿ ಪಕ್ಕದಲ್ಲಿದ್ದ ಮೇಜಿನ ಮೇಲಿಟ್ಟಿದ್ದರು. ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ಚಿನ್ನದ ಸರ ಕಳವಾಗಿರುವುದು ತಿಳಿದುಬಂದಿತ್ತು. ಈ ಸಂಬಂಧ ಕೂಡಲೇ ಚಿನ್ನ ಕಳೆದುಕೊಂಡ ವ್ಯಕ್ತಿ ಸರ ಕಳವು ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪೊಲೀಸರು ಬಸವರಾಜು ಪ್ರಕಾಶ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಒಂದು ಕನ್ನ ಕಳವು, 2 ಮನೆಗಳ ಕಳವು ಹಾಗೂ 2 ಸಾಮಾನ್ಯ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನ ವಿರುದ್ಧ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಲ್ಲಿ 32ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
from India & World News in Kannada | VK Polls https://ift.tt/3rNUMrT