ಸುರತ್ಕಲ್: ರಾತ್ರಿ ವೇಳೆ ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು, ಭಾರೀ ಹಾನಿ!

ಮಂಗಳೂರು: ಸಮೀಪದ ಕೃಷ್ಣಾಪುರ ಜನತಾ ಕಾಲೊನಿಯ ಮೇಲೆ ಕಿಡಿಗೇಡಿಗಳು ನಡೆಸಿದ ಘಟನೆ ಭಾನುವಾರ ನಡೆದಿದೆ. ಕೃಷ್ಣಾಪುರದ ಸಾದುಲಿ ಜುಮಾ ಮಸೀದಿ ಹಾಗೂ ಹಯಾತುಲ್‌ ಇಸ್ಲಾಮ್‌ ಮದರಸ ಕಟ್ಟಡಕ್ಕೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿ, ಕಿಟಕಿ ಗಾಜಿಗೆ ಹಾನಿ ಮಾಡಿದ್ದಾರೆ. ಭಾನುವಾರ ನಸುಕಿನ ಜಾವ ಈ ಘಟನೆ ನಡೆದಿರುವ ಬಗ್ಗೆ ಮಸೀದಿ ಕಮಿಟಿ ಜತೆ ಕಾರ್ಯದರ್ಶಿ ದಾವೂದ್‌ ಹಕೀಂ ಸುರತ್ಕಲ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಮಸೀದಿ ಇತ್ತೀಚೆಗಷ್ಟೆ ನವೀಕರಣಗೊಂಡಿತ್ತು. ಘಟನೆ ಬಗ್ಗೆ ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ ವ್ಯಕ್ತಪಡಿಸಿದ್ದು, ಸೌಹಾರ್ದತೆ ವಾತಾವರಣ ಕೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಯನ್ನು ಅಧ್ಯಕ್ಷ ಅಶ್ರಫ್‌ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


from India & World News in Kannada | VK Polls https://ift.tt/3unfZuF

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...