ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಆಗಿದೆ: ಸಚಿವ ಬೈರತಿ‌ ಬಸವರಾಜ‌

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ‌ ಬಸವರಾಜ ಹೇಳಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ ಅಂತೆ. ಅವರು ಹುಷಾರಾದ ಬಳಿಕ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರಕ್ಕೆ ಬರೋದಾಗಿ ಹೇಳಿದ್ದಾರೆ. ಸದ್ಯ ರಮೇಶ್ ಜಾರಕಿಹೊಳಿ‌ ಬೆಂಗಳೂರಿನಲ್ಲಿಯೇ ಇದ್ದಾರೆ ಎಂದು ತಿಳಿಸಿದರು. ಇನ್ನೆರಡು ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ‌ ಪ್ರಚಾರಕ್ಕೆ ಬರುತ್ತಾರೆ‌‌‌ ಕೇವಲ ಚುನಾವಣಾ ಪ್ರಚಾರ ಕುರಿತು ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಲಾಗಿದೆ. ರಮೇಶ್, ಬಾಲಚಂದ್ರ ಜತೆ ನಿನ್ನೆ ಫೋನ್‌ನಲ್ಲಿ ಮಾತನಾಡಿದ್ದೇನೆ ಇವತ್ತು ನಾನು, ನಮ್ಮೆಲ್ಲ ನಾಯಕರು ಗೋಕಾಕ, ಅರಭಾವಿಗೆ ಹೋಗುತ್ತಿದ್ದೇವೆ ಎಂದರು. ಸಿಎಂ ಸೂಚನೆಯಂತೆ ಬೆಳಗಾವಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ. ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಜಯ ಸಾಧಿಸುವಲ್ಲಿ ಸಂದೇಹ ಇಲ್ಲ. ಸುರೇಶ್ ಅಂಗಡಿ ಜನಪರ ಕಾರ್ಯಕ್ರಮ ಮುಂದಿಟ್ಟು ಮತಯಾಚನೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಜನಪರ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುತ್ತೇವೆ ಎಂದರು. ಬೆಳಗಾವಿ ನಗರ ಅಭಿವೃದ್ಧಿಗೆ ಇತ್ತೀಚೆಗೆ 150 ಕೋಟಿ ರೂ.‌ ಕೊಟ್ಟಿದ್ದೇವೆ. ಬೆಳಗಾವಿ ಜನತೆ ಅತಿಹೆಚ್ಚಿನ ಮತ ನೀಡಿ ಮಂಗಲ ಅಂಗಡಿಯವರನ್ನು ಗೆಲ್ಲಿಸುತ್ತಾರೆ.ನಿನ್ನೆ ಕುರುಬ ಸಮುದಾಯದ ಮುಖಂಡರ ಜೊತೆ ಚರ್ಚಿಸಿದ್ದೇನೆ. ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಕಿ ಜಯಭೇರಿ ಬಾರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಿದ್ದರಾಮಯ್ಯ ಆಗ್ರಹ ವಿಚಾರಕ್ಕೆ ಉತ್ತರಿಸಿದ ಅವರು, ಸಿದ್ದರಾಮಯ್ಯ ತಮ್ಮ ಪಕ್ಷದಲ್ಲಿ ಏನಾಗಿದೆ ಅದನ್ನು ನೋಡಿಕೊಳ್ಳಲಿ. ಕೋವಿಡ್ ಸಂದರ್ಭದಲ್ಲಿ ಸಿಎಂ ಬಿಎಸ್‌ವೈ ಅನೇಕ ಜನಪರ ಯೋಜನೆ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡಸಿದರು. ಇನ್ನೆರಡು ದಿನ ಬೆಳಗಾವಿಯಲ್ಲಿ ಇದ್ದು ಪ್ರಚಾರ ಮಾಡಿ ಮಸ್ಕಿ, ಬಸವಕಲ್ಯಾಣ ಹೋಗುತ್ತೇನೆ. ಸಿಎಂ ರಾಜೀನಾಮೆ ನೀಡಲಿ ಇಲ್ಲ ಈಶ್ವರಪ್ಪ ವಜಾ ಮಾಡಲಿ ಎಂಬ ಡಿಕೆಶಿಗೆ ಆಗ್ರಹ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ನಮ್ಮ ಆಂತರಿಕ ವಿಷಯ ಇದಕ್ಕೂ ಅವರಿಗೆ ಸಂಬಂಧ ಇಲ್ಲ. ನಾಳೆ ಬೆಳಗ್ಗೆಯೇ ಸಿಎಂ ಆಗುವ ಕನಸಿನಲ್ಲಿ ಅವರಿದ್ದಾರೆ ಎಂದರು.


from India & World News in Kannada | VK Polls https://ift.tt/3wlp1dk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...