ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ದಾಖಲೆ ಬರೆಯುತ್ತಿದೆ. ಇನ್ನೊಂದೆಡೆ ಸಾವಿನ ಸಂಖ್ಯೆಯೂ ಭಾರೀ ಏರಿಕೆಯಾಗುತ್ತಿದೆ. ಈಗಾಗಲೇ ದೇಶದ ಹಲವು ರಾಜಕಾರಣಿಗಳಿಗೆ ಸೋಂಕು ತಗುಲಿದೆ. ಈ ಮಧ್ಯೆ ಇದೀಗ ಬಿಜೆಪಿಯ ಇಬ್ಬರು ಶಾಸಕರು ಹಾಗೂ ಕೊರೊನಾಗೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯ ಜೋಬಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕಲಾವತಿ ಭೂರಿಯಾ ಕೊರೊನಾದಿಂದ ಸಾವನ್ನಪ್ಪಿದ್ದಾರೆ.10 ದಿನಗಳ ಹಿಂದೆ ಕಲಾವತಿ ಅವರಿಗೆ ಸೋಂಕು ದೃಢಪಟ್ಟಿತ್ತು. ಅಂದಿನಿಂದ ಇಂದೋರ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ಕಲಾವತಿಯವರು ಝಾಬುವಾ ಕ್ಷೇತ್ರದ ಶಾಸಕ ಕಾಂತಿಲಾಲ್ ಅವರ ಸೊಸೆ. ಝಾಬುವಾ ಜಿಲ್ಲಾ ಪಂಚಾಯ್ತಿಯಲ್ಲಿ 15 ವರ್ಷ ಅಧ್ಯಕ್ಷರಾಗಿದ್ದರು. ಇನ್ನು ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಪಶ್ಚಿಮ ಕ್ಷೇತ್ರದ ಶಾಸಕ ಸುರೇಶ್ ಶ್ರೀವಾತ್ಸವ್ ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಸುರೇಶ್ ಶ್ರೀವಾತ್ಸವ್ ಅವರನ್ನ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸುರೇಶ್ ಶ್ರೀವಾತ್ಸವ್ ಅವರಿಗೆ 76 ವರ್ಷ ವಯಸ್ಸು ಆಗಿತ್ತು. 15 ದಿನಗಳ ಹಿಂದೆ ಸುರೇಶ್ ಶ್ರೀವಾತ್ಸವ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಸುರೇಶ್ ಅವರ ಸಂಪರ್ಕದಲ್ಲಿದ್ದ ಸಚಿವರು ಸಹ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಇನ್ನು ಅವರ ಪತ್ನಿ ಹಾಗೂ ಮಗನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು ಯುಪಿಯ ಮತ್ತೋರ್ವ ಶಾಸಕ ರಮೇಶ್ ಚಂದ್ರ ದಿವಾಕರ್ ಕೂಡ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಔರಿಯಾ ಸದರ್‌ನ ಶಾಸಕರಾಗಿದ್ದಾರೆ.ಇನ್ನು ಶಾಸಕ ರಮೇಶ್ ಚಂದ್ರ ದಿವಾಕರ್ ಅವರ ಪತ್ನಿಗೂ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
from India & World News in Kannada | VK Polls https://ift.tt/3ngV0qS