ಹಿರಿಯ ಸಚಿವರೇ ಹೀಗೆ ಮಾಡಿದರೆ ಹೇಗೆ? ಈಶ್ವರಪ್ಪ ವಿರುದ್ಧ ರೇಣುಕಾಚಾರ್ಯ ಅಸಮಾಧಾನ

ಬೆಂಗಳೂರು: ಈಶ್ವರಪ್ಪನವರಂತಹಾ ಹಿರಿಯ ಸಚಿವರೇ ಸಿಎಂ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ? ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಹಾಗೂ ಹೈಕಮಾಂಡ್‌ಗೆ ಪತ್ರ ಬರೆದಿರುವ ಈಶ್ವರಪ್ಪ ನಡೆಗೆ ರೇಣುಕಾಚಾರ್ಯ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ಇದನ್ನು ಬಗೆ ಹರಿಸಿಕೊಳ್ಳಬೇಕಿತ್ತು.ಈಗ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಹೀಗೆ ಮಾಡಿರುವುದರಿಂದ ಚುನಾವಣೆ ಮೇಲೆ ಪರಿಣಾಮ ಬೀರಲ್ವಾ ಎಂದು ಪ್ರಶ್ನಿಸಿದರು. ಪಕ್ಷದ ಇಮೇಜ್ ಹಾಳಾಗೋದಿಲ್ವಾ.‌ನಾವು ಅರವತ್ತು ಶಾಸಕರು ಸಿಎಂನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದರಿಂದ ಅವರು ಬಿಡುಗಡೆ ಮಾಡಿದ್ದಾರೆ ಅದರಲ್ಲಿ ತಪ್ಪೇನು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡರು. ಈ ಮೊದಲು ಈಶ್ವರಪ್ಪನವರಿಗೂ ಭೇಟಿ ಮಾಡಿ ಮನವಿ ಮಾಡಿದ್ದೆವು.ಆದರೆ ಅವರು ಸ್ಪಂದಿಸಿರಲಿಲ್ಲ.ಹಾಗಾಗಿ ವಿಧಿಯಿಲ್ಲದೆ ಸಿಎಂ ನ್ನು ಭೇಟಿ ಮಾಡಬೇಕಾಯ್ತು ಎಂದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ವಜುಭಾಯ್ ವಾಲಾ ಸೇರಿ ಬಿಜೆಪಿ ಹೈಕಮಾಂಡ್ಗೆ ಪತ್ರದ ಮೂಲಕ ದೂರು ನೀಡಿದ್ದಾರೆ. ತಮ್ಮ ಇಲಾಖೆಗೆ ಬಿಡುಗಡೆಯಾದ 1,200 ಕೋಟಿ ರೂ.ಅನುದಾನ ಕುರಿತು ಹಸ್ತಕ್ಷೇಪ ಮಾಡುತ್ತಿದ್ದು, ಕೂಡಲೇ ಮಧ್ಯಪ್ರವೇಶ ಮಾಡಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈಶ್ವರಪ್ಪ ಪತ್ರ ಬಿಜೆಪಿಯಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.


from India & World News in Kannada | VK Polls https://ift.tt/3wjXzgf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...