ಬೆಳಗಾವಿ: ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್ ಅವರೊಂದಿಗೆ ಬಂದಿದ್ದ ಮಂಗಳಾ ಅಂಗಡಿ, ನಗರದ ಸದಾಶಿವ ನಗರ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರು ಬಂದು ನನ್ನ ಪರವಾಗಿ ಪ್ರಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬಹಳ ಪ್ರಚಾರ ನಡೆಸಿದ್ದಾರೆ. ಹೀಗಾಗಿ ಬಿಜೆಪಿಯೇ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಕುಟುಂಬದವರ ಮೇಲೆ ವಿಶ್ವಾಸ ಇಟ್ಟು ಪಕ್ಷದವರು ಟಿಕೆಟ್ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕ್ಷೇತ್ರದಾದ್ಯಂತ ಪ್ರಚಾರ ಚೆನ್ನಾಗಿ ಆಗಿದೆ. ಎಲ್ಲರೂ ಬಂದು ಸುರಕ್ಷತಾ ಕ್ರಮಗಳನ್ನು ಕೈಗೊಂಡು ಹಕ್ಕು ಚಲಾಯಿಸಬೇಕು. ಮತಗಟ್ಟೆಯಲ್ಲೂ ಕೋವಿಡ್ ಮಾರ್ಗಸೂಚಿ ಪಾಲಿಸಲಾಗುತ್ತಿದೆ ಎಂದರು. ಶ್ರದ್ಧಾ ಶೆಟ್ಟರ್ ಮಾತನಾಡಿ, ಇಡೀ ಪಕ್ಷ ನಮ್ಮ ಕುಟುಂಬದ ಜೊತೆ ಇದ್ದಾರೆ. ಕಾರ್ಯಕರ್ತರೂ ಶ್ರಮಿಸಿದ್ದಾರೆ. ಹೀಗಾಗಿ ನಮ್ಮ ತಾಯಿ ಗೆಲ್ಲುತ್ತಾರೆ. ಮತಗಟ್ಟೆಗಳಲ್ಲೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ವಹಿಸಲಾಗಿದೆ. ಮತದಾರರು ಬಂದು ಮತ ಚಲಾಯಿಸಬೇಕು ಎಂದರು.
from India & World News in Kannada | VK Polls https://ift.tt/3x54lqe