ಕೋವಿಡ್‌ನಿಂದ ಗುಣಮುಖರಾದ ಬಿಎಸ್‌ವೈ, ಆಸ್ಪತ್ರೆಯಿಂದ ಗುರುವಾರ ಡಿಸ್ಚಾರ್ಜ್?

ಬೆಂಗಳೂರು: ಕೋವಿಡ್‌ ಸೋಂಕು ಪಾಸಿಟಿವ್‌ ಆಗಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಗುರುವಾರ ನಡೆಸಿದ ಕೋವಿಡ್‌ ಟೆಸ್ಟ್‌ನಲ್ಲಿ ಅವರಿಗೆ ನೆಗೆಟಿವ್ ಬಂದಿದೆ. ಬಿಎಸ್‌ವೈ ಅವರಿಗೆ ಎರಡನೇ ಬಾರಿ ಕೋವಿಡ್‌ ಬಂದಿತ್ತು. ಉಪಚುನಾವಣೆಯ ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅವರಿಗೆ ತೀವ್ರ ಜ್ವರ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಕೋವಿಡ್‌ ಟೆಸ್ಟ್‌ ಮಾಡಿಸಿದ ಸಂದರ್ಭದಲ್ಲಿ ಅವರಿಗೆ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಈ ಕಾರಣಕ್ಕಾಗಿ ಮಣಿಪಾಲ್‌ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿದ್ದುಕೊಂಡೇ ಅವರು ಕೋವಿಡ್‌ ಸಭೆಗಳನ್ನು ನಡೆಸಿದ್ದರು. ಸರ್ವಪಕ್ಷ ಸಭೆಗೂ ಅವರು ಆಸ್ಪತ್ರೆಯಿಂದಲೇ ವರ್ಚುವಲ್ ಮೂಲಕ ಭಾಗಿಯಾಗಿದ್ದರು. ಅಲ್ಲದೆ ಬುಧವಾರ ಕೂಡಾ ಕೋವಿಡ್‌ ಕುರಿತಾಗಿ ಸಭೆಗಳನ್ನು ನಡೆಸಿದ್ದರು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಬಹುತೇಕ ಗುರುವಾರ ಬೆಳಗ್ಗೆ 11 ಗಂಟೆಗೆ ಅವರು ಡಿಸ್ಚಾರ್ಜ್‌ ಆಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಬಿಡುಗಡೆ ಆದ ಬಳಿಕ ಸರಣಿ ಸಭೆಗಳನ್ನು ಅವರು ನಡೆಸಲಿದ್ದಾರೆ. ವಾಕ್ಸಿನ್‌ ಖರೀದಿ ಸೇರಿದಂತೆ ಇತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ಸಭೆಗಳನ್ನು ನಡೆಸಲಿದ್ದಾರೆ.


from India & World News in Kannada | VK Polls https://ift.tt/3dDeWB6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...