ವೈದ್ಯಕೀಯ ಆಕ್ಸಿಜನ್ ಹಂಚಿಕೆಯಲ್ಲೂ ರಾಜ್ಯಕ್ಕೆ ಘನಘೋರ ಅನ್ಯಾಯ, ಈಶ್ವರ್‌ ಖಂಡ್ರೆ ಕಿಡಿ

ಬೆಂಗಳೂರು: ವೈದ್ಯಕೀಯ ಆಕ್ಸಿಜನ್ ಹಂಚಿಕೆಯಲ್ಲಿ ರಾಜ್ಯಕ್ಕೆ ಘನಘೋರ ಅನ್ಯಾಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಕೇಂದ್ರ ಸರ್ಕಾರ ಹಾಗೂ ರಾಜ್ಯದ ಸಂಸದರ ಮೇಲೆ ಹರಿಹಾಯ್ದಿದ್ದಾರೆ. ಕರ್ನಾಟಕ ರಾಜ್ಯದ ಬಗ್ಗೆ ಪದೇ ಪದೇ ಅಸಡ್ಡೆ ತೋರುತ್ತಿರುವ ನರೇಂದ್ರಮೋದಿ ಸರ್ಕಾರ ವೈದ್ಯಕೀಯ ಆಕ್ಸಿಜೆನ್ ಹಂಚಿಕೆಯಲ್ಲೂ ರಾಜ್ಯಕ್ಕೆ ಘನಘೋರ ಅನ್ಯಾಯ ಎಸಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಕರ್ನಾಟಕದ ಜನರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಏಕಿಷ್ಟು ಆಕ್ರೋಶ? ಎಂದು ಪ್ರಶ್ನಿಸಿದರು ಖಂಡ್ರೆ ರಾಜ್ಯದ 25 ಸಂಸದರಿಗೆ ಜನರ ಜೀವ ಉಳಿಸುವ ಬದ್ಧತೆ ಇಲ್ಲವೇ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಲ್ಲಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಆಕ್ಸಿಜನ್ ಹಾಗೂ ಹಾಸಿಕೆ ಕೊರತೆ ಇದೆ. ಮತ್ತೊಂದು ಕಡೆಯಲ್ಲಿ ಕೋವಿಡ್‌ ಸೋಂಕಿತರಿಗೆ ಬಳಸಲಾಗುತ್ತಿರುವ ರೆಮಿಡಿಸಿವಿರ್‌ ಔಷಧಿಯ ಕೊರತೆಯೂ ಎದುರಾಗಿದೆ. ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಅದು ಸಾಧ್ಯವಾಗುತ್ತಿಲ್ಲ. ಸದ್ಯ ರಾಜ್ಯದಲ್ಲಿ ಒಟ್ಟು 14,39,822 ಪ್ರಕರಣಗಳು ಇವೆ. ಬುಧವಾರ ಒಂದೇ ದಿನ 39,047 ಹೊರ ಪ್ರಕರಣಗಳು ವರದಿಯಾಗಿವೆ. ಕೋವಿಡ್‌ಗೆ ತುತ್ತಾಗಿ 15,036 ಮಂದಿ ಮೃತಪಟ್ಟಿದ್ದಾರೆ. ಬುಧವಾರ 229 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ.


from India & World News in Kannada | VK Polls https://ift.tt/2QwVaPh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...