ಚಿಕ್ಕೋಡಿ: ಮಗುವಿನೊಂದಿಗೆ ತಾಯಿ‌ ಆತ್ಮಹತ್ಯೆ, ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಕಠಿಣ ನಿರ್ಧಾರ!

ಚಿಕ್ಕೋಡಿ: ಅರಣ್ಯ ಇಲಾಖೆಯಲ್ಲಿ ಗಾರ್ಡ್‌ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ತನ್ನ ಮೂರು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಕುಂತಲಾ ಚಿದಾನಂದ ಬ್ಯಾಳಿ (31) ಹಾಗೂ ಮಗು ಭುವನ ಮೃತಪಟ್ಟವರು. ಅವರು ಚಿಕ್ಕೋಡಿ ತಾಲೂಕಿನ ಕುಂಗಟೋಳಿ ಗ್ರಾಮದಲ್ಲಿ ಬಾವಿಗೆ ಹಾರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಕುಂತಲಾ ಅವರ ಪತಿ ಚಿದಾನಂದ ಚಿಕ್ಕೋಡಿ ತಾಲೂಕಿನ ಡೋಣವಾಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತಿ - ಪತ್ನಿ ನಡುವೆ ಕೌಟುಂಬಿಕ ಕಲಹವಿತ್ತು. ಪತಿ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಕಾರಣಕ್ಕೆ ಶಕುಂತಲಾ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಚಿಕ್ಕೋಡಿ ಪೊಲೀಸರು ತಿಳಿಸಿದ್ದಾರೆ. ಸಿಪಿಐ ಆರ್‌.ಆರ್‌.ಪಾಟೀಲ ಮತ್ತು ಪಿಎಸ್‌ಐ ರಾಕೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/2R5HZVk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...