ಕೋವಿಡ್‌ ನಿಯಂತ್ರಣಕ್ಕೆ ಠಫ್ ರೂಲ್ಸ್, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಠಿಣ ನಿಯಮಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು ಈ ನಿಟ್ಟಿನಲ್ಲಿ ಇದನ್ನು ಚಾಲ್ತಿಗೆ ತರುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಜೊತೆಗೆ ಗೃಹ ಸಚಿವ ಸಭೆ ನಡೆಸಲಿದ್ದಾರೆ. ಡಿ.ಜಿ, ಐಪಿಜಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಹಾಗೂ ಇತರ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಕೋವಿಡ್‌ ರೂಲ್ಸ್‌ಗಳನ್ನು ರಾಜ್ಯಾದ್ಯಂತ ಹೇಗೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂಬ ನಿಟ್ಟಿನಲ್ಲಿ ಗೃಹ ಸಚಿವರು ಅಧಿಕಾರಿಗಳು ಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಸುವುದು ಕೂಡಾ ಸವಾಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಅನಗತ್ಯವಾಗಿ ರಸ್ತೆಗಿಳಿಯುವ ವಾಹನಗಳನ್ನು ಸೀಜ್ ಮಾಡುವುದು, ಕೋವಿಡ್ ನಿಯಮಗಳನ್ನು ಪಾಲನೆ ಮಾಡದೇ ಇದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವುದು ಮುಂತಾದ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯು ಸಾಧ್ಯತೆ ಇದೆ.


from India & World News in Kannada | VK Polls https://ift.tt/2Pde9xC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...