‘ನರೇಂದ್ರ ಮೋದಿ ಮತ್ತು ಬಿಎಸ್‌ವೈ ರೈತರನ್ನು ಸಾಯಿಸಲು ಪೈಪೋಟಿಗೆ ಇಳಿದಂತಿದೆ’; ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ರೋಗದ ಪರಿಣಾಮವಾಗಿ ಜರ್ಜರಿತರಾಗಿರುವ ರೈತರ ನೆರವಿಗೆ ಬರಬೇಕಾಗಿದ್ದ ಕೇಂದ್ರ ಸರ್ಕಾರ ರಸಗೊಬ್ಬರದ ಬೆಲೆ ಏರಿಸಿ ರೈತರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದೆ. ಪ್ರಧಾನಿ ಮತ್ತು ರಾಜ್ಯದ ಮುಖ್ಯಮಂತ್ರಿಗಳು ರೈತರನ್ನು ಸಾಯಿಸಲು ಪೈಪೋಟಿಗೆ ಇಳಿದಂತಿದೆ ಎಂದು ವಿಪಕ್ಷ ನಾಯಕ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಪ್ರಕಟಿಸಿರುವ ಅವರು, ರಸಗೊಬ್ಬರಕ್ಕೆ ನೀಡುತ್ತಿದ್ದ ಸಬ್ಸಿಡಿಯನ್ನು ಏಕಾಏಕಿ ಅಂದಾಜು ರೂ.45,000 ಕೋಟಿಯಷ್ಟು ಕಡಿತಗೊಳಿಸಿರುವುದೇ ರಸಗೊಬ್ಬರ ಕಂಪೆನಿಗಳು ಬೆಲೆ ಏರಿಸಲು ಕಾರಣ. ಕೇಂದ್ರ ಸರ್ಕಾರ ಈ ಸತ್ಯವನ್ನು ಮುಚ್ಚಿಟ್ಟು ಸುಳ್ಳು ಕಾರಣಗಳನ್ನು ನೀಡುತ್ತಿದೆ ಎಂದಿದ್ದಾರೆ. ಅಲ್ಲದೇ ಹಳೆಯ ದಾಸ್ತಾನಿನ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಗೆ ತದ್ವಿರುದ್ಧವಾಗಿ ರಾಜ್ಯ ಕೃಷಿ ಇಲಾಖೆ ಆದೇಶ ಹೊರಡಿಸಿದೆ. ರೈತರ ಹಾದಿ ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಟಕ‌ ಮಾಡುತ್ತಿವೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಆರೂವರೆ ಲಕ್ಷ ಮೆಟ್ರಿಕ್ ಟನ್ ಡಿಎಪಿಗೆ ಬೇಡಿಕೆ ಇದೆ. ಈಗ ಇರುವ ದಾಸ್ತಾನು ಕೇವಲ 77,401 ಮೆ.ಟನ್ ಮಾತ್ರ. ಇದರಿಂದಾಗಿ ಹಳೆದಾಸ್ತಾನಿಗೆ ಹಳೆಯ ದರದ ಸೂಚನೆಯಿಂದ ರೈತರಿಗೆ ಯಾವ ಲಾಭವೂ ಆಗಲಾರದು ಎಂದಿರುವ ಸಿದ್ದರಾಮಯ್ಯ, ಈಗಾಗಲೇ ರಸಗೊಬ್ಬರ ಕಂಪೆನಿಗಳು ಹೊಸದರದ ರಸಗೊಬ್ಬರವನ್ನು ಮಾರುಕಟ್ಟೆಗೆ ಸುರಿದಿವೆ. ಎಲ್ಲ ರಸಗೊಬ್ಬರಗಳ ಬೆಲೆಯನ್ನು ಸರಾಸರಿ ಶೇಕಡಾ 60ರಷ್ಟು ಹೆಚ್ಚಿಸಲಾಗಿದೆ. ಏಪ್ರಿಲ್ ಒಂದಕ್ಕೆ ಕ್ವಿಂಟಲ್ ಡಿಎಪಿಗೆ ರೂ.2400ರಷ್ಟಿದ್ದ ಬೆಲೆ ಈಗ ರೂ.3400 ಆಗಿದೆ ಎಂದಿದ್ದಾರೆ. ಇನ್ನು ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇನೆಂದು ಆಶ್ವಾಸನೆ ನೀಡಿದ್ದ ಪ್ರಧಾನಿ ಮೋದಿ ಅವರು ರಸಗೊಬ್ಬರದ ಬೆಲೆ‌ ದುಪ್ಪಟ್ಟು ಮಾಡಿದ್ದಾರೆ. ನೂತನ ಕೃಷಿ ಕಾಯ್ದೆಗಳನ್ನು ದೇಶದಾದ್ಯಂತ ವಿರೋಧಿಸುತ್ತಿರುವ ರೈತರ ವಿರುದ್ಧ ಸೇಡುತೀರಿಸಿಕೊಳ್ಳುವ ದುರುದ್ದೇಶದಿಂದಲೇ ಕೇಂದ್ರ ಸರ್ಕಾರ ರಸಗೊಬ್ಬರ ಕಂಪೆನಿಗಳ ಜೊತೆ ಷಾಮೀಲಾಗಿ ರೈತರನ್ನು ಸುಲಿಗೆ ಮಾಡಲು ಹೊರಟಂತಿದೆ. ಹಳೆ ದಾಸ್ತಾನು, ಹೊಸ ದಾಸ್ತಾನು ಎಂಬ ನಾಟಕವನ್ನು ಕೇಂದ್ರ ಸರ್ಕಾರ ಕೈಬಿಟ್ಟು‌, ರಸಗೊಬ್ಬರಕ್ಕೆ ನೀಡುತ್ತಿರುವ ಸಬ್ಸಿಡಿಯನ್ನು ತಕ್ಷಣ ಹೆಚ್ಚಿಸಿ ಏರಿಸಿರುವ ಬೆಲೆಯನ್ನು ಮೊದಲಿನ ಸ್ಥಿತಿಗೆ ಇಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


from India & World News in Kannada | VK Polls https://ift.tt/3sBKtrH

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...