ವಿದ್ಯಾರ್ಥಿನಿಯರಿಗೆ ನ್ಯಾಪ್‌ಕಿನ್ ನೀಡಲು ಸರ್ಕಾರದ ನಿರ್ಲಕ್ಷ್ಯ; ವರದಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ಮತ್ತು ಅಗತ್ಯ ಸ್ಯಾನಿಟರಿ ನ್ಯಾಪ್‌ಕಿನ್‌ ಒದಗಿಸುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾ.16ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್‌ ಸರಕಾರಕ್ಕೆ ಆದೇಶಿಸಿದೆ. ಶಾಲೆಗಳ ಸ್ಥಿತಿಗತಿ ಕುರಿತ ಪಿಐಎಲ್‌ ವಿಚಾರಣೆ ನಡೆಸುತ್ತಿರುವ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ಗುರುವಾರ ರಾಜ್ಯ ಸರ್ಕಾರಕ್ಕೆ ಈ ಆದೇಶ ನೀಡಿದೆ. ಶುಚಿ ಯೋಜನೆಯಡಿ 2021-22ನೇ ಸಾಲಿನಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌/ಪ್ಯಾಡ್‌ ಖರೀದಿಗೆ ಯಾವಾಗ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂಬ ಕುರಿತು ವರದಿಯಲ್ಲಿ ವಿವರ ನೀಡಬೇಕು. ಅಲ್ಲದೆ, ಶಾಲೆ ಮತ್ತು ಹಾಸ್ಟೆಲ್‌ಗಳಲ್ಲಿರುವ 10ರಿಂದ 19 ವರ್ಷದೊಳಗಿನ 17,06,933 ಬಾಲಕಿಯರಿಗೆ ಸರಕಾರ ಮೊದಲು ನ್ಯಾಪ್‌ಕಿನ್‌ ನೀಡಿತ್ತು. ಆದರೆ ಆರ್ಥಿಕ ಸಂಕಷ್ಟದ ಕಾರಣಕ್ಕೆ 2019-20, 2020-21ನೇ ಸಾಲಿನಲ್ಲಿ ಅದಕ್ಕೆ ಹಣಕಾಸು ನಿಗದಿ ಮಾಡಿಲ್ಲವೇಕೆ ಎಂದು ಕೋರ್ಟ್‌ ಪ್ರಶ್ನಿಸಿದೆ. ಪ್ರತ್ಯೇಕ ಶೌಚಾಲಯ, ಸ್ಯಾನಿಟರಿ ನ್ಯಾಪ್‌ಕಿನ್‌ ನೀಡುವುದು ಸಬಲೀಕರಣದ ಸಂಕೇತವಾಗಿದ್ದು, ಮಹಿಳೆಯರ ಸಬಲೀಕರಣ ಮಾಡುವ ಉದ್ದೇಶ ಸರಕಾರಕ್ಕೆ ಇದ್ದರೆ ಮೊದಲು ಈ ಸೌಕರ‍್ಯಗಳನ್ನು ಒದಗಿಸಿ ಎಂದು ನ್ಯಾಯಾಲಯ ಹೇಳಿದೆ.


from India & World News in Kannada | VK Polls https://ift.tt/3whqBgm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...