ಭಾರತ ಮಹಿಳಾ ಕ್ರಿಕೆಟ್‌ ತಂಡದ ವೇದಾ ಕೃಷ್ಣಮೂರ್ತಿಗೆ ಮಾತೃ ವಿಯೋಗ!

: ಭಾರತ ಮಹಿಳಾ ಕ್ರಿಕೆಟ್‌ ತಂಡದ ಆಟಗಾರ್ತಿ ಅವರ ತಾಯಿ ಕೊರೊನಾ ವೈರಸ್‌ನಿಂದಾಗಿ ಕೊನೆಯುಸಿರೆಳೆದಿದ್ದಾರೆಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಕೋವಿಡ್‌-19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕಡೂರಿನ ಖಾಸಗಿ ಆಸ್ಪತ್ರೆಗೆ ಚೆಲುವಾಂಬ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ವೇದಾ ಕೃಷ್ಣಮೂರ್ತಿ ಅವರ ತಾಯಿ ಮೃತಪಟ್ಟಿದ್ದಾರೆ. ವೇದಾ ಕೃಷ್ಣಮೂರ್ತಿ ಅವರು 2011ರ ಜೂನ್‌ 30 ರಂದು ಇಂಗ್ಲೆಂಡ್‌ ವಿರುದ್ಧ ಅಂತಾರಾಷ್ಟ್ರೀಯ ಓಡಿಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಅವರು ಇಲ್ಲಿಯವರೆಗೂ ಭಾರತ ಮಹಿಳಾ ತಂಡದ ಪರ 48 ಪಂದ್ಯಳಾಡಿದ್ದು, 8 ಅರ್ಧಶತಕಗಳೊಂದಿಗೆ 829 ರನ್‌ಗಳನ್ನು ದಾಖಲಿಸಿದ್ದಾರೆ. ಇನ್ನು 2011ರ ಜೂನ್‌ 11 ರಂದು ಆಸ್ಟ್ರೇಲಿಯಾ ವಿರುದ್ಧ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಕರ್ನಾಟಕ ಆಟಗಾರ್ತಿ, 76 ಪಂದ್ಯಗಳಲ್ಲಿ ಎರಡು ಅರ್ಧಶತಕಗಳೊಂದಿಗೆ 875 ರನ್‌ಗಳನ್ನು ಗಳಿಸಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3xgz9op

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...