Live Updates: ಕರ್ನಾಟಕ ಉಪಚುನಾವಣೆಗೆ ಸಕಲ ಸಿದ್ಧತೆ; ಮತಗಟ್ಟೆಗಳಲ್ಲಿ ಬಿಗಿ ಭದ್ರತೆ

ಕಳೆದ ಕೆಲದಿನಗಳಿಂದ ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ಉಪಚುನಾವಣೆಯ ಮತದಾನ ಇಂದು ಆರಂಭವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ವಿಧಾನಸಭಾ ಕ್ಷೇತ್ರ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಭಾರೀ ಕಸರತ್ತು ನಡೆಸಿವೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ದಿ.ನಾರಾಯಣರಾವ್ ಅವರ ಪತ್ನಿ ಮಾಲಾ, ಬಿಜೆಪಿಯಿಂದ ಶರಣು ಸಲಗರ ಮತ್ತು ಜೆಡಿಎಸ್‌ನಿಂದ ಸಯ್ಯದ್ ಯಸ್ರಬ್‌ ಅಲಿ ಖಾದ್ರಿ ಕಣದಲ್ಲಿದ್ದಾರೆ. ಮಸ್ಕಿಯಲ್ಲಿ ಬಿಜೆಪಿಯಿಂದ ಪ್ರತಾಪ್‌ ಗೌಡ ಪಾಟೀಲ್ ಮತ್ತು ಕಾಂಗ್ರೆಸ್‌ನಿಂದ ಬಸನಗೌಡ ಪಾಟೀಲ್‌ ತುರ್ವಿಹಾಳ ಸ್ಪರ್ಧಿಸಿದ್ದಾರೆ. ಕಣದಲ್ಲಿರುವ ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮತದಾನಕ್ಕೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ. === 8.15 am : 8.05 am: ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರ ಕುಟುಂಬದವರು ಮತದಾನ ಮಾಡಿದರು. ** 8.00 am : ಮಸ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಅವರು ಸಿಂಧನೂರು ತಾಲೂಕಿನ ತುರುವಿಹಾಳದ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು ** 7.55 am : ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರು ಪುತ್ರಿಯರಾದ ಶ್ರದ್ಧಾ ಅಂಗಡಿ ಹಾಗೂ ಡಾ.ಸ್ಫೂರ್ತಿ ಪಾಟೀಲ್‌ ಜೊತೆ ಬಂದು ಮತದಾನ ಮಾಡಿದರು. ** 7.50 am : ** 7.45 am: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಕಲ ಸಿದ್ಧತೆ, ಒಟ್ಟು 305 ಮತಗಟ್ಟೆಯಲ್ಲಿ ಮತ ಚಲಾವಣೆ ನಡೆಯಲಿದೆ.


from India & World News in Kannada | VK Polls https://ift.tt/32m5iMP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...