ಹೊಸದಿಲ್ಲಿ: ವಿವಿಧ ಫ್ರಾಂಚೈಸಿಗಳ ಆಟಗಾರರಿಗೆ ಕೋವಿಡ್-19 ಪಾಸಿಟಿವ್ ಬಂದ ಬೆನ್ನಲ್ಲೆ 2021ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ತನ್ನ ಅಧಿಕೃತ ಟ್ವಿಟರ್‌ನಲ್ಲಿ ತಿಳಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದ ವೃದ್ದಿಮಾನ್ ಸಹಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹಿರಿಯ ಸ್ಪಿನ್ನರ್ ಅವರಿಗೆ ಮಂಗಳವಾರ ಕೋವಿಡ್-19 ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಅವರು 2021ರ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿದೆ ಎಂಬ ಬೆಳವಣಿಗೆಗಳನ್ನು ಎಎನ್‌ಐಗೆ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ದಿಲ್ಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ 2021ರ ಐಪಿಎಲ್ 31ನೇ ಪಂದ್ಯ ನಡೆಯಬೇಕಾಗಿತ್ತು. ಆದರೆ, ಇಂದು ಹೈದರಾಬಾದ್ ವಿಕೆಟ್ ಕೀಪರ್ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪಂದ್ಯವನ್ನು ನಿಲ್ಲಿಸಲಾಗಿದೆ. ಅಲ್ಲದೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಮಿತ್ ಮಿಶ್ರಾ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಇದನ್ನೂ
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3eiPSjs