ಬೆಂಗಳೂರು: ಮೃತ ವ್ಯಕ್ತಿಯ ದೇಹ ಹಸ್ತಾಂತರಿಸುವ ವೇಳೆ ಚಿಕಿತ್ಸೆಯ ಬಾಕಿ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಸೋಮವಾರ ಆದೇಶ ಹೊರಡಿಸಿದೆ. ಕೊರೊನಾ ಸೋಂಕಿತ ಮೃತಪಟ್ಟ ಸಂದರ್ಭದಲ್ಲಿ ರಾಜ್ಯದ ಅನೇಕ ಮೃತ ಸಂಬಂಧಿಕರಿಗೆ ಚಿಕಿತ್ಸೆಯ ಬಾಕಿ ಬಿಲ್ ಪಾವತಿ ಮಾಡುವಂತೆ ಒತ್ತಡ ಹೇರುತ್ತಿವೆ. ಇಲ್ಲದಿದ್ದರೆ ಮೃತದೇಹ ನೀಡಲು ಹಿಂದೇಟು ಹಾಕಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಇಂತಹ ಪ್ರಕರಣಗಳನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಆದೇಶಿಸಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವ ಸರಕಾರ ವಾರಕ್ಕೆ ಒಂದು ಬಾರಿ ರಾಜ್ಯ ಮಟ್ಟಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ.
from India & World News in Kannada | VK Polls https://ift.tt/34dGMhR