ಬ್ಲ್ಯಾಕ್‌ ಫಂಗಸ್ ಆತಂಕ: ಎಚ್ಚೆತ್ತುಕೊಂಡ ಸರ್ಕಾರ, ರಾಜ್ಯಾದ್ಯಂತ ಸೂಕ್ತ ಚಿಕಿತ್ಸೆಗೆ ಕ್ರಮ

ಬೆಂಗಳೂರು: ಬ್ಲ್ಯಾಕ್‌ ಫಂಗಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಅನುಮತಿ ನೀಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮ್ಯುಕೋರ್ ಮೈಸೋಸಿಸ್ ಬ್ಲ್ಯಾಕ್ ಫಂಗಸ್ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನನಿಯಂತ್ರಣಕ್ಕೆ ಶೀಘ್ರವಾಗಿ ಚಿಕಿತ್ಸೆ ನೀಡುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸಾ ವಿಧಾನವನ್ನು ತಿಳಿಸಲಾಗಿದ್ದು, ಹಾಗೂ ನಿಗದಿತ ಆಸ್ಪತ್ರೆಗಳಲ್ಲಿ ಮಾತ್ರವೇ ಚಿಕಿತ್ಸೆ ನೀಡಲು ಅನುಮತಿ ನೀಡಲಾಗಿತ್ತು. ಆದರೆ ಜಿಲ್ಲೆಗಳಲ್ಲೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಮತಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ. ಸೂಕ್ತ ವ್ಯವಸ್ಥೆ ಹಾಗೂ ಸಾಮರ್ಥ್ಯ ಹೊಂದಿರುವ ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲೂ ಸಹ ಬ್ಲ್ಯಾಕ್ ಫಂಗಸ್‌ ಸೋಂಕಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಬ್ಲ್ಯಾಕ್‌ ಫಂಗಸ್ ಸೋಂಕನ್ನು ಸಾಂಕ್ರಾಮಿಕ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಇತರ ರಾಜ್ಯಗಳಲ್ಲಿ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಆದರೆ ಕರ್ನಾಟಕದಲ್ಲಿ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.


from India & World News in Kannada | VK Polls https://ift.tt/3wvWIbE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...