ಕೋವಿಡ್‌ ಚಿಕಿತ್ಸೆಯಲ್ಲಿ ಖಾಸಗಿ ಆಸ್ಪತ್ರೆಗಳ ಕಳ್ಳಾಟ: ಸರ್ಕಾರಿ ಆಸ್ಪತ್ರೆಯಿಂದ ಬಂದ ರೋಗಿಗಳ ನಿರ್ಲಕ್ಷ್ಯ..?

ಆರಗ ರವಿ : ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ಕಳ್ಳಾಟ ಆಡುತ್ತಿವೆ. ಸರಕಾರಿ ಕೋವಿಡ್‌ ಆಸ್ಪತ್ರೆಯಿಂದ ರೆಫರ್‌ ಮಾಡಿ ಕಳಿಸುವ ಕೊರೊನಾ ಸೋಂಕಿತರನ್ನು ಕೆಲವು ಖಾಸಗಿ ಆಸ್ಪತ್ರೆಗಳ ವೈದ್ಯರು ಕಣ್ಣೆತ್ತಿಯೂ ನೋಡುತ್ತಿಲ್ಲ..! ಖಾಸಗಿ ಆಸ್ಪತ್ರೆಗಳಿಗೆ ನೇರವಾಗಿ ದಾಖಲಾದ ರೋಗಿಗಳಿಗೆ ಚಿಕಿತ್ಸೆ ನೀಡಿದರೆ, ಸರಕಾರಿ ಕೋವಿಡ್‌ ಆಸ್ಪತ್ರೆಗೆ ಮೀಸಲಿಟ್ಟ ಬೆಡ್‌ಗಳಿಗೆ ದಾಖಲಾದವರಿಗೆ ಯಾವ ಚಿಕಿತ್ಸೆಯನ್ನೂ ನೀಡುತ್ತಿಲ್ಲ. ಬೆಡ್‌ ಕೂಡ ಕೊಡದೆ ನೆಲದ ಮೇಲೆ ಮಲಗಿಸುತ್ತಿದ್ದು, ಕೊರೊನಾ ಸೋಂಕಿತರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಸರಕಾರಿ ಕೋವಿಡ್‌ ಆಸ್ಪತ್ರೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಮೀಸಲಿರುವ ಬೆಡ್‌ಗಳಿಗೆ ರೋಗಿಗಳನ್ನು ರೆಫರ್‌ ಮಾಡಲಾಗುತ್ತಿದೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗಬಹುದು ಎಂಬ ರೋಗಿಗಳ ನಂಬಿಕೆ ಹುಸಿಯಾಗುತ್ತಿದೆ. ಸರಕಾರಿ ಆಸ್ಪತ್ರೆಯಿಂದ ರೆಫರ್‌ ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಕೋವಿಡ್‌ ವಿರುದ್ಧ ವೈದ್ಯಲೋಕ ಪ್ರಾಣದ ಹಂಗು ತೊರೆದು ಹೋರಾಡುತ್ತಿದ್ದರೆ, ಕೆಲವರು ಧನದಾಹಕ್ಕೆ ವೈದ್ಯಲೋಕದ ಗೌರವವನ್ನೇ ಹಾಳು ಮಾಡುತ್ತಿದ್ದಾರೆ. ಕೆಲವು ಖಾಸಗಿ ಆಸ್ಪತ್ರೆಗಳ ಧನದಾಹದಿಂದಾಗಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ದೊರೆಯದೆ ಸಾವುಗಳ ಸಂಖ್ಯೆಯೂ ಹೆಚ್ಚಾಗಿದೆ. ಜನರು ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವಾಗ ಕೆಲವು ಆಸ್ಪತ್ರೆಗಳು ಹಣ ಮಾಡಿಕೊಳ್ಳಲು ಹೊಂಚು ಹಾಕುತ್ತಿವೆ ಎಂದು ನೊಂದವರು ದೂರಿದ್ದಾರೆ.


from India & World News in Kannada | VK Polls https://ift.tt/2QMzCyf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...