ಕೋವಿಡ್‌ ಸಂಕಷ್ಟ: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಜೊತೆ ಸಿದ್ದರಾಮಯ್ಯ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಂಕಷ್ಟ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಅವರು ಬುಧವಾರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜತೆ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ, ಆಕ್ಸಿಜನ್, ಬೆಡ್, ವೆಂಟಿಲೇಟರ್ ಗಳ ಕೊರತೆ, ಇದಕ್ಕೆ ಪ್ರತಿಯಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದರು. ಅದೇ ರೀತಿ ಜನರ ಸೋಂಕಿತರು ಎದುರಿಸುತ್ತಿರುವ ಸಂಕಷ್ಟ ನಿವಾರಣೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆಯೂ ಸಲಹೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಜನ ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಸಿಗದೆ ಚಾಮರಾಜನಗರದಲ್ಲಿ 25 ಮಂದಿಯ ಸಾವಾಗಿದೆ. ಆದರೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಮೂರು ಸಾವಾಗಿರುವುದು ಎಂದು ಹೇಳುತ್ತಿರುವುದು ಶುದ್ಧ ಸುಳ್ಳು ಎಂದರು. ನಾನು ಹಾಗೂ ಡಿಕೆ ಶಿವಕುಮಾರ್ ಚಾಮರಾಜನಗರದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ಡಿ ಹೆಚ್ ಒ, ಡಿ ಸಿ ಎಲ್ಲಾ ಜೊತೆಗೆ ಸಭೆ ಮಾಡಿದ್ವಿ .ಆಕ್ಸಿಜನ್ ಕೊರತೆಯಿಂದ ಸಾವಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಸುಳ್ಳು ಮಾಹಿತಿಯನ್ನು ಆರೋಗ್ಯ ಸಚಿವರು ಹೇಳಿದ್ದಾರೆ ಎಂದು ಆರೋಪ ಮಾಡಿದರು. ಅಲ್ಲಿ ಪ್ರತಿ ಪೇಶೆಂಟ್ ಗೆ ಅಗತ್ಯ ಇರುವಂತೆ 350 ಆಕ್ಸಿಜನ್ ಸಿಲಿಂಡರ್ ಬೇಕು ಅವತ್ತು 126 ಸಿಲಿಂಡರ್‌ ಪೂರೈಕೆ ಆಗಿತ್ತು. ಭಾನುವಾರವೂ ಸಿಲಿಂಡರ್‌ ಪೂರೈಕೆ ಆಗಿರಲಿಲ್ಲ. ಇದರ ಪರಿಣಾಮವಾಗಿ ಮೇ 2 ರಿಂದ ಮೇ 3 ರವರೆಗೂ 25 ಜನ ಸತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಈ ವಿಷಯಗಳನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹೇಳಿದ್ದೇನೆ. ಕೂಡಲೇ ಚಾಮರಾಜನಗರ ಆಸ್ಪತ್ರೆ ಗೆ ಅಗತ್ಯ ಇರುವ ಆಕ್ಸಿಜನ್ ಒದಗಿಸುವ ಕೆಲಸ ಮಾಡಿ ಎಂದು ಸೂಚಿಸಿದ್ದೇನೆ. ನಿನ್ನೆಯಿಂದಲೇ ಪ್ರಾರಂಭ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ ಎಂದು ತಿಳಿಸಿದರು.


from India & World News in Kannada | VK Polls https://ift.tt/3f0qRJ0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...