ರಾಯಚೂರು: ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವಗೌಡ ತುರವಿಹಾಳ ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ. ಮತಎಣಿಕೆಯಲ್ಲಿ ಸದ್ಯ 15,000 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವಗೌಡ ತುರವಿಹಾಳ ಮುನ್ನಡೆ ಸಾಧಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 19942 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಬಸವಗೌಡ ತುರವಿಹಾಳ 29336 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಭಾರೀ ಅಂತರವನ್ನು ಕಾಂಗ್ರೆಸ್ ಅಭ್ಯರ್ಥಿ ಪಡೆದುಕೊಂಡಿದ್ದಾರೆ.ಕಳೆದ ಬಾರಿಯ ಚುನಾವಣೆಯಲ್ಲಿ ಸುಮಾರು 200 ಮತಗಳ ಅಂತರದಲ್ಲಿ ಪ್ರತಾಪಗೌಡ ಪಾಟೀಲ್ ಗೆಲವು ಸಾಧಿಸಿದ್ದರು. ಆದರೆ ಈ ಬಾರಿ ಭಾರೀ ಅಂತರದಲ್ಲಿ ಸೋಲನ್ನು ಅನುಭವಿಸುವುದು ಖಚಿತವಾಗಿದೆ. ಈ ಬಗ್ಗೆ ಮಾತನಾಡಿದ ಪ್ರತಾಪಗೌಡ ಪಾಟೀಲ್, ಆಡಳಿತ ವಿರೋಧಿ ಅಲೆಯಿಂದ ಹಿನ್ನಡೆಯಾಗಿದೆ. ಕಳೆದ ಮೂರು ಸಲ ಶಾಸಕರಾಗಿ ಅಭಿವೃದ್ಧಿ ಮಾಡಿದ್ದೆ. ಆದರೂ ಮತದಾರರು ತಮ್ಮವಿರುದ್ಧ ಮತ ಹಾಕಿರುವುದು ಆಡಳಿತ ವಿರೋಧಿ ಅಲೆಯಿದೆ ಎಂಬುದನ್ನು ಬಯಲು ಗೊಳಿಸಿದೆ ಎಂದುಮತ ಎಣಿಕೆ ಕೇಂದ್ರದಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ನಂತರ ಮಸ್ಕಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಹೇಳಿಕೆ ನೀಡಿದ್ದಾರೆ.
from India & World News in Kannada | VK Polls https://ift.tt/3vFqCtv