ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಬೆಡ್ ಬ್ಲಾಕ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತಾಗಿ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಬೆಡ್ ಅಲಾಟ್ಮೆಂಟ್ ವಿಚಾರದಲ್ಲಿ ಲೋಪ ಆಗುತ್ತಿರುವುದು ಹಾಗೂ ಅವ್ಯವಹಾರಗಳ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದಾರೆ. ಜಯನಗರದಲ್ಲಿ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ಇದೀಗ ಸಿಸಿಬಿ ಗೆ ವರ್ಗಾವಣೆ ಮಾಡಿದ್ದಾರೆ . ಸಿಸಿಬಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಿದ್ದಾರೆ. ಇದು ಒಂದೇ ವಲಯದಲ್ಲಿ ಮಾತ್ರ ಅಲ್ಲ, ಬಿಬಿಎಂಪಿ ಎಲ್ಲಾ ವಲಯದಲ್ಲಿ ಆಗಿರಬಹುದು ಎಂದರು. ಈ ನಿಟ್ಟಿನಲ್ಲಿ ನಮ್ಮ ತನಿಖೆಯನ್ನು ಎಲ್ಲಾ ವಲಯಕ್ಕೆ ವಿಸ್ತರಣೆ ಮಾಡುತ್ತೇವೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗಿದೆ. ಮತ್ತಷ್ಟು ಜನರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು. ಕೋವಿಡ್ ಸಂಧರ್ಭದಲ್ಲಿ ಅರ್ಹರಿಗೆ ಬೆಡ್ ಕೊಡದೆ ಅಪಚಾರ ಮಾಡಿದ್ದಾರೆ. ಸಿಸಿಬಿ ಈಗಾಗಲೇ ಕಾರ್ಯಾಚರಣೆ ಮಾಡುತ್ತಿದೆ. ಈ ದಂಧೆಯ ಹಿಂದೆ ಯಾರಿದ್ದಾರೆ ಅವರೆಲ್ಲರ ಮೇಲೆ ಕಠಿಣ ಕ್ರಮ ಜರುಗಿಸುತ್ತೇವೆ ಎಂಬ ಭರವಸೆಯನ್ನು ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
from India & World News in Kannada | VK Polls https://ift.tt/2SmNOhz