ಮುಂಬೈ ವಿರುದ್ದ ಇಂದಿನ ಪಂದ್ಯದಲ್ಲಿಯೂ ವಾರ್ನರ್‌ ಆಡುವುದು ಅನುಮಾನ!

ಹೊಸದಿಲ್ಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿಂದು ರಾತ್ರಿ 7:30ಕ್ಕೆ 2021ರ ಆವೃತ್ತಿಯ ಟೂರ್ನಿಯ 31ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ತಂಡಗಳು ಮುಖಾಮುಖಿಯಾಗುತ್ತಿವೆ. ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಆಡಿರುವ 7 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು, ಇನ್ನುಳಿದ 3 ಹಣಾಹಣಿಗಳಲ್ಲಿ ಸೋಲು ಅನುಭವಿಸಿದ್ದು, ಒಟ್ಟು 8 ಅಂಕಗಳೊಂದಿಗೆ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ಗೆದ್ದಿದ್ದ ಅದೇ ಲಯವನ್ನು ಇಂದು ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಮುಂದುವರಿಸಲು ಮುಂಬೈ ಎದುರು ನೋಡುತ್ತಿದೆ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಆಡಿರುವ 7 ಪಂದ್ಯಗಳಲ್ಲಿ 6ರಲ್ಲಿ ಸೋತಿದ್ದು, ಒಂದೇ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಪಡೆದಿದೆ. ಕೇವಲ ಎರಡು ಅಂಕಗಳೊಂದಿಗೆ ಹೈದರಾಬಾದ್‌ ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ. ಇದೀಗ ನಾಯಕತ್ವದಲ್ಲಿ ಎಸ್‌ಆರ್‌ಎಚ್, ಮುಂಬೈ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆ ಸಿಲುಕಿದೆ. ಪಿಚ್ ವರದಿ: ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ಕಳೆದ ಎರಡು ಪಂದ್ಯಗಳಲ್ಲಿ 200ಕ್ಕೂ ಅಧಿಕ ಮೊತ್ತ ದಾಖಲಾಗಿರುವುದೇ ಇದಕ್ಕೆ ಸಾಕ್ಷಿ. ಮತ್ತೊಂದು ಪ್ರಮುಖ ಅಂಶವೇನೆಂದರೆ ಈ ಅಂಗಳ ಚಿಕ್ಕದಾಗಿರುವ ಹಿನ್ನೆಲೆಯಲ್ಲಿ ಬೌಂಡರಿ ಹಾಗೂ ಸಿಕ್ಸರ್‌ಗಳು ಸುಲಭವಾಗಿ ಹೊಡೆಯಬಹುದು. ಈ ದೃಷ್ಟಿಯಿಂದ ಈ ಪಂದ್ಯದಲ್ಲಿ ದೊಡ್ಡ ಮೊತ್ತದ ಪಂದ್ಯ ಆಗುವ ಎಲ್ಲಾ ಸಾಧ್ಯತೆಗಳಿವೆ. ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್‌ ಸನ್‌ರೈಸರ್ಸ್ ಹೈದರಾಬಾದ್‌: ಮನೀಷ್ ಪಾಂಡೆ, ಜಾನಿ ಬೈರ್‌ಸ್ಟೋವ್‌(ವಿ.ಕೀ), ಕೇನ್‌ ವಿಲಿಯಮ್ಸನ್‌ (ನಾಯಕ), ವಿಜಯ್‌ ಶಂಕರ್‌, ಕೇದಾರ್‌ ಜಾಧವ್‌, ಮೊಹಮ್ಮದ್‌ ನಬಿ, ಅಬ್ದುಲ್‌ ಸಮದ್‌, ರಶೀದ್‌ ಖಾನ್‌, ಭುವನೇಶ್ವರ್ ಕುಮಾರ್‌, ಸಂದೀಪ್‌ ಶರ್ಮಾ, ಖಲೀಲ್ ಅಹ್ಮದ್‌. ಮುಂಬೈ ಇಂಡಿಯನ್ಸ್: ಕ್ವಿಂಟನ್‌ ಡಿ ಕಾಕ್‌, ರೋಹಿತ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌, ಕೃಣಾಲ್‌ ಪಾಂಡ್ಯ, ಕೈರೊನ್‌ ಪೊಲಾರ್ಡ್, ಹಾರ್ದಿಕ್‌ ಪಾಂಡ್ಯ, ಜೇಮ್ಸ್ ನೀಶಮ್‌, ಧವಳ್‌ ಕುಲಕರ್ಣಿ, ರಾಹುಲ್ ಚಹರ್‌, ಜಸ್‌ಪ್ರಿತ್‌ ಬುಮ್ರಾ, ಟ್ರೆಂಟ್‌ ಬೌಲ್ಟ್ ಮುಖಾಮುಖಿ ದಾಖಲೆ ಆಡಿರುವ ಒಟ್ಟು ಪಂದ್ಯಗಳು: 17 ಮುಂಬೈ ಇಂಡಿಯನ್ಸ್ ಗೆಲುವು: 9 ಸನ್‌ರೈಸರ್ಸ್ ಹೈದರಾಬಾದ್‌ ಗೆಲುವು: 8 ಪಂದ್ಯದ ವಿವರ ಪಂದ್ಯ: ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್‌ ದಿನಾಂಕ, ಸಮಯ: ಮೇ. 4, 2021, ಅರುಣ್‌ ಜೆಟ್ಲಿ ಕ್ರೀಡಾಂಗಣ, ದಿಲ್ಲಿ ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3gW1B9f

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...