ಲಾಕ್‌ಡೌನ್‌ ಭವಿಷ್ಯ: ಪ್ರಧಾನಿ ಮೋದಿ ನಿರ್ದೇಶನದಂತೆ ಮುಂದಿನ ಕ್ರಮ, ಬಿಎಸ್‌ವೈ ಸ್ಪಷ್ಟನೆ

ಬೆಂಗಳೂರು: ಕೋವಿಡ್‌ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ದೇಶಾದ್ಯಂತ ಚರ್ಚೆ ಶುರುವಾಗಿದ್ದು ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಏನು ನಿರ್ದೇಶನ ಕೊಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಪ್ರಧಾನಿ ಮೋದಿಯಿಂದ ಬರುವ ಸಲಹೆ ಸೂಚನೆ ಪಾಲನೆ ಮಾಡುತ್ತೇವೆ, ಅವರ ನಿರ್ದೇಶನದಂತೆ ನಡೆದುಕೊಳ್ಳುತ್ತೇವೆ. ಲಾಕ್‌ಡೌನ್ ಅಥವಾ ಇತರ ನಿರ್ಬಂಧಗಳ ಕುರಿತಾಗಿ ಅವರು ನಿರ್ದೇಶನಕ್ಕೆ ಕಾಯುತ್ತಿದ್ದೇವೆ ಅದರಂತೆ ರಾಜ್ಯ ಸರ್ಕಾರ ತನ್ನ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದರು. ಮಂಗಳವಾರ ಸಾಯಂಕಾಲ ನಂತರ ಕೇಂದ್ರದ ನಿರ್ದೇಶನದ ಆಧಾರದಲ್ಲಿ ತೀರ್ಮಾನವನ್ನು ಕೈಗೊಳ್ಳುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಕರ್ಫ್ಯೂ ಜಾರಿಯಲ್ಲಿ ಇದ್ದರೂ ಕೆಲವೊಂದು ರಿಯಾಯಿತಿಗಳನ್ನು ನೀಡಲಾಗಿದೆ. ಹೋಟೆಲ್‌, ಹಣ್ಣು ತರಕಾರಿ, ಹಾಲು ಮಾರಾಟದ ಅಂಗಡಿಗಳಿಗೆ ಸಂಜೆ ಆರು ಗಂಟೆಯ ವರಗೆ ತೆರೆಯಲು ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಬೆಳಗ್ಗೆ 10 ಗಂಟೆಯ ವರೆಗೆ ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲದೆ ಕೈಗಾರಿಕೆ ನಿರ್ಮಾಣ ಕಾರ್ಯಗಳಿಗೂ ಅನುಮತಿ ನೀಡಲಾಗಿದೆ.


from India & World News in Kannada | VK Polls https://ift.tt/2QY7Iz4

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...