ಮಸ್ಕಿ ಬೈಎಲೆಕ್ಷನ್: ಒಂಬತ್ತನೇ ಸುತ್ತಿನಲ್ಲೂ ಪ್ರತಾಪಗೌಡ ಪಾಟೀಲ್‌ಗೆ ಹಿನ್ನಡೆ

ರಾಯಚೂರು: ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿಯ ಫೈಟ್ ನಡೆಯುತ್ತಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಈ ಚುನಾವಣೆಯಲ್ಲಿ ಪಕ್ಷಾಂತರ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್‌ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ಮಸ್ಕಿಯಲ್ಲಿ ಪ್ರತಾಪಗೌಡ ಪಾಟೀಲ್ 12,240 ಮತಗಳನ್ನು ಪಡೆದುಕೊಂಡಿದ್ದಾರೆ. ಅದರಂತೆ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರು 19395 ಮತಗಳನ್ನು ಪಡೆದುಕೊಂಡಿದ್ದಾರೆ. ಒಂಬತ್ತನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ 9000 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ. ಪ್ರತಾಪಗೌಡ ಪಾಟೀಲ್ ಕಾಂಗ್ರೆಸ್‌ನಲ್ಲಿ ಕಳೆದ ಬಾರಿ ಗೆದ್ದು ಶಾಸಕರಾಗಿದ್ದರು. ಆದರೆ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿಗೆ ಸೇರ್ಪಡೆಗೊಂಡು ಉಪಚುನಾವಣೆಯಲ್ಲಿ ಸ್ಪರ್ಧೆ ನಡೆಸಿದ್ದರು. ಆದರೆ ಬಿಜೆಪಿಯಲ್ಲಿದ್ದ ಬಸವನಗೌಡ ತುರವಿಹಾಳ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡು ಸ್ಪರ್ಧೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಈ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಿಸಿದೆ. ಬಸವಕಲ್ಯಾಣ ಉಪ ಚುನಾವಣೆ ಫಲಿತಾಂಶ ಹೇಗಿದೆ? -- ಬಸವಕಲ್ಯಾಣದಲ್ಲಿ 5ನೇ ಸುತ್ತು ಮುಕ್ತಾಯಗೊಂಡಿದ್ದು ಕಾಂಗ್ರೆಸ್ - 7900, ಬಿಜೆಪಿ - 15052, ಜೆಡಿಎಸ್ -1158 ಮತಗಳನ್ನು ಪಡೆದುಕೊಂಡಿದ್ದು ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.


from India & World News in Kannada | VK Polls https://ift.tt/3xIHiSv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...