ಹೊಸದಿಲ್ಲಿ: ಸಿಬಿಐನ ನೂತನ ಮುಖ್ಯಸ್ಥರಾಗಿ, ಅಧಿಕಾರಿ ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮುಖ್ಯಸ್ಥ ಅವರನ್ನು ನೇಮಿಸಲಾಗಿದೆ. ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಅವರು ಕೇಂದ್ರ ತನಿಖಾ ಸಂಸ್ಥೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಲೋಕಸಭೆಯಲ್ಲಿನ ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರ ಸಮಿತಿ ನಡುವೆ ನಡೆದ ಸರಣಿ ಸಭೆಗಳ ಬಳಿಕ ಮಂಗಳವಾರ ಸಂಜೆ ಸರ್ಕಾರ ಈ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಜೈಸ್ವಾಲ್ ಅವರು ಕೇಡರ್‌ನ 1985ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮುಂಬೈ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದ ಅವರು, ಮಹಾರಾಷ್ಟ್ರ ಪೊಲೀಸ್ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದರು. ಈ ವರ್ಷದ ಆರಂಭದಲ್ಲಿ ಅವರಿಗೆ ಕೇಂದ್ರ ಸೇವೆಗೆ ಬಡ್ತಿ ನೀಡಲಾಗಿತ್ತು. ಅವರು ಈ ಹಿಂದೆ ಸಿಬಿಐನಲ್ಲಿ ಕೆಲಸ ಮಾಡಿಲ್ಲ. ಆದರೆ ಇಂಟೆಲಿಜೆನ್ಸ್ ಬ್ಯೂರೋ ಹಾಗೂ ರೀಸರ್ಚ್ ಆಂಡ್ ಅನಾಲಿಸಿಸ್ ವಿಂಗ್ (ರಾ) ಭಾಗವಾಗಿದ್ದರು.
from India & World News in Kannada | VK Polls https://ift.tt/3yGK3UQ