ಇಬ್ಬರಿಗೆ ಕೋವಿಡ್‌ ಪಾಸಿಟವ್‌! ; ಆರ್‌ಸಿಬಿ vs ಕೆಕೆಆರ್‌ ಇಂದಿನ ಪಂದ್ಯ ಮುಂದಕ್ಕೆ?

ಹೊಸದಿಲ್ಲಿ: ಹೊಸದಿಲ್ಲಿ: ಕೋಲ್ಕತಾ ನೈಟ್‌ ರೈಡರ್ಸ್ ತಂಡದ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಹಾಗೂ ವೇಗಿ ಅವರಿಗೆ ಕೊವಿಡ್‌-19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಇಂದು(ಮೇ.3) ನಡೆಯಬೇಕಿದ್ದ ಆರ್‌ಸಿಬಿ ಹಾಗೂ ಕೆಕೆಆರ್‌ ನಡುವಿನ ಪಂದ್ಯವನ್ನು ಮುಂದೂಡಲು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಚಿಂತಿಸುತ್ತಿದೆ. ಕೋಲ್ಕತಾ ನೈಟ್‌ ರೈಡರ್ಸ್ ತಂಡದಲ್ಲಿ ಹಲವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ, ಆರ್‌ಸಿಬಿ ತಂಡ ಇಂದು ಕಣಕ್ಕೆ ಇಳಿಯುವುದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದೆ. "ಕೆಕೆಆರ್‌ ತಂಡದ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಹಾಗೂ ವೇಗಿ ಸಂದೀಪ್‌ ವಾರಿಯರ್‌ ಅವರಿಗೆ ಕೋವಿಡ್‌-19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಇಂದಿನ ಪಂದ್ಯವಾಡಲು ಮುಂದಾಗುತ್ತಿಲ್ಲ. ಈ ಕಾರಣದಿಂದ ಈ ಪಂದ್ಯವನ್ನು ಮುಂದೂಡುವ ಸಾಧ್ಯತೆ ದಟ್ಟವಾಗಿದೆ," ಎಂದು ಅಧಿಕಾರಿ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,68,147 ಕೋವಿಡ್‌-19 ಪ್ರಕರಣಗಳು ದಾಖಲಾಗಿದೆ ಹಾಗೂ 3,417 ಮಂದಿ ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಸೋಮವಾರ ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಹದಿನಾಲ್ಕನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿ ಆರಂಭವಾಗುವುದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಕ್ಷರ್‌ ಪಟೇಲ್‌ ಅವರಿಗೂ ಕೋವಿಡ್‌-19 ಪಾಸಿಟಿವ್‌ ಬಂದಿತ್ತು. ನಂತರ ಕೋಲ್ಕತಾ ನೈಟ್‌ ರೈಡರ್ಸ್ ತಂಡದ ನಿತೀಶ್‌ ರಾಣಾ ಹಾಗೂ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ದೇವದತ್‌ ಪಡಿಕ್ಕಲ್ ಅವರಿಗೂ ಕೊರೊನಾ ವೈರಸ್‌ ಸೋಂಕು ತಗುಲಿತ್ತು. ಆದರೆ, ಟೂರ್ನಿ ಆರಂಭಕ್ಕೂ ಮೊದಲೇ ಇವರೆಲ್ಲರ ಕೋವಿಡ್‌ ಟೆಸ್ಟ್‌ನಲ್ಲಿ ನೆಗೆಟಿವ್‌ ಬಂದಿತ್ತು. 2021ರ ಐಪಿಎಲ್‌ ಟೂರ್ನಿಯ ಬಯೋ-ಬಬಲ್‌ನಲ್ಲಿ ಕೋವಿಡ್‌ ಪಾಸಿಟಿವ್‌ ಬಂದಿರುವುದು ಇದೇ ಮೊದಲ ಪ್ರಕರಣವಾಗಿದೆ. ಈ ಬಗ್ಗೆ ಐಪಿಎಲ್‌ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್ ಅಧಿಕೃತವಾಗಿ ಹೇಳಿಕೆ ಪ್ರಕಟಿಸುವುದು ಮಾತ್ರ ಬಾಕಿ ಇದೆ. ಇನ್ನು ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಕೋಲ್ಕತಾ ನೈಟ್‌ ರೈಡರ್ಸ್ ತಂಡ ಆಡಿರುವ 7 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ. ಕೇವಲ ಎರಡು ಅಂಕಗಳೊಂದಿಗೆ ಕೆಕೆಆರ್‌ ಪಾಯಿಂಟ್ಸ್ ಟೇಬಲ್‌ನಲ್ಲಿ 7ನೇ ಸ್ಥಾನದಲ್ಲಿದೆ. ಕಳೆದ ಗುರುವಾರ ಅಹ್ಮದಾಬಾದ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತಾ ಸೋಲು ಅನುಭವಿಸಿತ್ತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3b0y76a

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...