
ಮೂಲ್ಕಿ (ದಕ್ಷಿಣ ಕನ್ನಡ): ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾದ ಸುಮಾರು 50 ಲಕ್ಷ ರೂ. ವೌಲ್ಯದ 354 ಕೆ.ಜಿ ಮಾದಕ ವಸ್ತುಗಳನ್ನು ಮುಲ್ಕಿ ಕೊಲ್ನಾಡು ಜಂಕ್ಷೃನ್ ಸಮೀಪದ ಬಯೋ ಮೆಡಿಕಲ್ ವೇಸ್ಟ್ ಟ್ರೀಟ್‌ಮೆಂಟ್ ರೂಮ್‌ನಲ್ಲಿ ಶನಿವಾರ ನಾಶಪಡಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ವಿರೋಧಿ ದಿನದ ಪ್ರಯುಕ್ತ ನಡೆಸಿದ ಕಾರ್ಯಾಚರಣೆ ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು ಎಂದು ತಿಳಿಸಿದರು. "50 ಪ್ರಕರಣಗಳಲ್ಲಿ 130ಕ್ಕೂ ಹೆಚ್ಚು ಕೆ.ಜಿ. ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದರಲ್ಲಿ ಗಾಂಜಾ, ಎಲ್‌ಎಸ್‌ಡಿ, ಎಂಡಿಎಂಎ, ಕೊಕೇನ್, ಬ್ರೌನ್ ಶುಗರ್ ಒಳಗೊಂಡಿದೆ," ಎಂದವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾತನಾಡಿ, ಎಸ್‌ಬಿ ವ್ಯಾಪ್ತಿಯಲ್ಲಿ 224 ಕೆ.ಜಿ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ 214 ಪ್ರಕರಣ ದಾಖಲಾಗಿವೆ ಎಂದು ವಿವರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಎಸ್‌ಪಿ ಭಾಸ್ಕರ್ ವಿ.ಬಿ., ಬಂಟ್ವಾಳ ಡಿವೈಎಸ್‌ಪಿ ವ್ಯಾಲಂಟೆನ್ ಡಿಸೋಜ, ಡಿಸಿಆರ್‌ಬಿ ಡಿವೈಎಸ್ಪಿ ದಿನಕರ ಶೆಟ್ಟಿ, ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ. ಕುಮಾರ್, ಬಯೋ ಮೆಡಿಕಲ್ ವೇಸ್ಟ್ ಟ್ರೀಟ್‌ಮೆಂಟ್ ರೂಮ್‌ನ ಇನ್‌ಚಾರ್ಜ್ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.
from India & World News in Kannada | VK Polls https://ift.tt/3ha0u4a