ಸಿದ್ದರಾಮಯ್ಯಗೆ ಕಾಣಿಸಿಕೊಂಡ ಅನಾರೋಗ್ಯ, ಎರಡು ದಿನಗಳ ಕಾಲ ವಿಶ್ರಾಂತಿಗೆ ವೈದ್ಯರ ಸೂಚನೆ

ಬೆಂಗಳೂರು: ವಿರೋಧ ಪಕ್ಷದ ನಾಯಕ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ಮಂಗಳವಾರ ಬೆಳಗ್ಗೆಯಿಂದ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ. ಹೀಗಾಗಿ ಮಂಗಳವಾರ ಮತ್ತು ಬುಧವಾರ ನಿಗದಿಯಾಗಿದ್ದ ಅವರ ಕಾರ್ಯಕ್ರಮಗಳು ರದ್ದಾಗಿದೆ. ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ. ಈ ಹಿಂದೆ ಅವರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಕೋವಿಡ್ ಲಸಿಕೆ ಎರಡು ಡೋಸ್‌ಗಳನ್ನು ಸಿದ್ದರಾಮಯ್ಯ ಈಗಾಗಲೇ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಪತ್ರಿಕಾಗೋಷ್ಠಿಯನ್ನು ಅವರು ನಡೆಸಿದ್ದರು. ಆದರೆ ರಾತ್ರಿ ವೇಳೆಯಲ್ಲಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಬೆಳಗ್ಗೆಯಿಂದಲೇ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ತಪಾಸಣೆಯನ್ನು ನಡೆಸಿದ್ದರು. ಆದರೆ ವರದಿ ನೆಗೆಟಿವ್ ಬಂದಿದೆ. ಹೀಗಿದ್ದರೂ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ.


from India & World News in Kannada | VK Polls https://ift.tt/3uEwUIW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...