ಅಕ್ರಮ ಮರಳು ಅಡ್ಡೆಗೆ ಮಧ್ಯರಾತ್ರಿ ದಾಳಿ ನಡೆಸಿದ ಬಂಟ್ವಾಳ ತಹಶೀಲ್ದಾರ್‌ ನೇತೃತ್ವದ ತಂಡ

ಬಂಟ್ವಾಳ: ಬಂಟ್ವಾಳ ತಾಲೂಕಿನ ಎಂಬಲ್ಲಿ ಮರಳು ಅಡ್ಡೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಶುಕ್ರವಾರ ಮಧ್ಯರಾತ್ರಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಮರಳುಗಾರಿಕೆಗೆ ಬಳಸಲಾಗುತ್ತಿರುವ ಆರೋಪದಲ್ಲಿ ಎರಡು ಬೋಟ್ ಮತ್ತು ಟಿಪ್ಪರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್. ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30ರ ಬಳಿಕ ಈ ಕಾರ್ಯಾಚರಣೆಯನ್ನು ಕಂದಾಯ ಇಲಾಖೆಯ ತಂಡ ಅರಣ್ಯ ಇಲಾಖೆ ಮತ್ತು ನಗರ ಠಾಣೆ ಪೊಲೀಸರ ಸಹಯೋಗದೊಂದಿಗೆ ನಡೆಸಿದ್ದು, ದಾಳಿ ವೇಳೆ ಇಬ್ಬರು ಪರಾರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಹಲವೆಡೆ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.


from India & World News in Kannada | VK Polls https://ift.tt/2UvZxvk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...