ಸಾರಿಗೆ ಸಿಬ್ಬಂದಿಗೆ ಕೋವಿಡ್ ಲಸಿಕೆ ಆಂದೋಲನ: ಲಕ್ಷ್ಮಣ ಸವದಿ ಚಾಲನೆ

ಬೆಂಗಳೂರು: ಪ್ರಯಾಣಿಕರ ಆರೋಗ್ಯದ ಹಿತದೃಷ್ಟಿಯಿಂದ ಲಾಕ್ ಡೌನ್ ಮುಗಿದ ನಂತರ ಪ್ರಾರಂಭವಾಗುವ ಸಾರಿಗೆ ಸೇವೆಗೆ ಎರಡನೇ ಸುತ್ತಿನ ಕೋವಿಡ್ ಲಸಿಕೆ ಪಡೆದಂತಹ ಚಾಲಕರು ಮತ್ತು ನಿರ್ವಾಹಕರನ್ನೇ ಬಳಸಿಕೊಳ್ಳಲು ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಅವರು ಸ್ಪಷ್ಟಪಡಿಸಿದರು. ಬೆಂಗಳೂರಿನ ಶಾಂತಿನಗರದಲ್ಲಿ ಬಿ. ಎಂ. ಟಿ. ಸಿ. ಯ ಸಿಬ್ಬಂದಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಆಂದೋಲನಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಬಿ. ಎಂ. ಟಿ. ಸಿ. ಯಲ್ಲಿ ಒಟ್ಟು ಸುಮಾರು 31 ಸಾವಿರದಷ್ಟು ಸಿಬ್ಬಂದಿಗಳಿದ್ದು, ಇವರಲ್ಲಿ ಈಗಾಗಲೇ ಸುಮಾರು 19 ಸಾವಿರದಷ್ಟು ಮಂದಿಗೆ ಲಸಿಕೆ ಗಳನ್ನು ಉಚಿತವಾಗಿ ನೀಡಲಾಗಿದೆ. ಉಳಿದವರಿಗೂ ಆದ್ಯತೆ ಮೇರೆಗೆ, ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. ಲಾಕ್ ಡೌನ್ ಮುಗಿದ ನಂತರ ಕರ್ತವ್ಯದಲ್ಲಿ ತೊಡಗುವ ಸಿಬ್ಬಂದಿಗಳಿಗೆ ಎರಡು ಸುತ್ತಿನ ಲಸಿಕೆಯನ್ನು ನೀಡಿದ್ದಲ್ಲಿ ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದಲೂ ಸುರಕ್ಷಿತವಾಗುತ್ತದೆ ಎಂದು ಸವದಿ ವಿವರಿಸಿದರು. ನಾಲ್ಕೂ ಸಾರಿಗೆ ನಿಗಮಗಳಲ್ಲಿ ಇದೇ ರೀತಿಯ ಉಚಿತ ಲಸಿಕೆ ನೀಡುವ ಅಭಿಯಾನವನ್ನು ಏರ್ಪಡಿಸಲಾಗುತ್ತಿದೆ. ಇವುಗಳ ಪ್ರಯೋಜನವನ್ನು ಎಲ್ಲಾ ಸಿಬ್ಬಂದಿಗಳು ಕಡ್ಡಾಯವಾಗಿ ಪಡೆಯಬೇಕೆಂದು ಸವದಿಯವರು ಮನವಿ ಮಾಡಿಕೊಂಡರು. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಲಾಕ್ ಡೌನ್ ಅವಧಿಯನ್ನು ಎಲ್ಲಿಯವರೆಗೆ ಜಾರಿಯಲ್ಲಿರಬೇಕು ಎಂಬುದನ್ನು ಶೀಘ್ರವೇ ನಿರ್ಧರಿಸಲಾಗುವುದು. ಲಾಕ್ ಡೌನ್ ಅವಧಿಯ ಬಗ್ಗೆ ಸರಕಾರ ಅಂತಿಮವಾಗಿ ಯಾವ ನಿರ್ಧಾರವನ್ನು ಕೈಗೊಳ್ಳುತ್ತದೆ ಎಂಬ ಆಧಾರದ ಮೇಲೆ ಸಾರಿಗೆ ಸಂಸ್ಥೆಗಳ ಸೇವೆಯನ್ನು ಪುನ: ಪ್ರಾರಂಭಿಸಲಾಗುವುದು. ಆದ್ದರಿಂದ ಸಾರಿಗೆ ಬಸ್ಸುಗಳ ಸಂಚಾರವನ್ನು ಯಾವಾಗ ಪುನರ್ ಪ್ರಾರಂಭಿಸಲಾಗುತ್ತದೆ ಎಂದು ಈಗಲೇ ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಸವದಿಯವರು ತಿಳಿಸಿದರು. ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವುದರಿಂದ ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವುದು ತುಸು ಸಮಾಧಾನಕರ ಸಂಗತಿ. ಹಾಗಂತ ಯಾರೂ ಸುರಕ್ಷತಾ ಕ್ರಮಗಳನ್ನು ಪಾಲಿಸುವಲ್ಲಿ ನಿರ್ಲಕ್ಷ ತೋರಬಾರದು ಎಂದು ಸವದಿಯವರು ಸಲಹೆ ನೀಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತ, ಬಿ. ಎಂ. ಟಿ. ಸಿ. ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಸಿ. ಶಿಖಾ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/34AE8D8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...