ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಜಾರಿಯಲ್ಲಿರುವ ಲಾಕ್ಡೌನ್ನನ್ನು ಹಂತ- ಹಂತವಾಗಿ ಅನ್ಲಾಕ್ ಮಾಡಿದರೆ ಸೂಕ್ತ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಲಾಕ್ಡೌನ್ ವಿಸ್ತರಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಬುಧವಾರ ಹಾಗೂ ಗುರುವಾರ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಲಾಕ್ಡೌನ್ ಕುರಿತಾಗಿ ತಜ್ಞರ ಸಮಿತಿಯ ಜೊತೆಗೆ ಚರ್ಚೆ ನಡೆಸಲಾಗುವುದು. ಏಕಕಾಲಕ್ಕೆ ತೆರವು ಬೇಡ ಬದಲಾಗಿ ಹಂತ ಹಂತವಾಗಿ ತೆರವು ಮಾಡಿ ಎಂಬುವುದು ನನ್ನ ಅಭಿಪ್ರಾಯವಾಗಿದೆ ಎಂದು ತಿಳಿಸಿದರು. ಆದರೆ ಈ ಎಲ್ಲಾ ವಿಚಾರಗಳ ಕುರಿತಾಗಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಜೂನ್ 7 ರ ವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ಡೌನ್ ವಿಸ್ತರಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಕೋವಿಡ್ ಪಾಸಿಟಿವಿಟಿ ರೇಟ್ ಶೇ. 5 ಕ್ಕೆ ಬರುವ ವರೆಗೂ ಲಾಕ್ಡೌನ್ ಮಾಡಿ ಎಂದು ತಜ್ಞರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿಗತಿ ಗಮನದಲ್ಲಿಟ್ಟುಕೊಂಡು ಲಾಕ್ಡೌನ್ ಪ್ರಕ್ರಿಯೆಯನ್ನು ಹಂತ ಹಂತವಾಗಿ ಸಡಿಲಗೊಳಿಸುವ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಕುರಿತಾಗಿ ತಜ್ಞರು ಹಾಗೂ ಸಚಿವರ ಜೊತೆ ಸಭೆ ನಡೆಯಲಿದ್ದು ಸಭೆಯ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
from India & World News in Kannada | VK Polls https://ift.tt/34AhXwN