ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ವಾರಾಂತ್ಯ ಕರ್ಫ್ಯೂ ಘೋಷಣೆಯಾಗಿದ್ದರೂ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಹಾಗೂ ಯುವಕ ನಕಲಿ ಪಾಸ್ ಬಳಸಿ ನಗರದ ಲಾಡ್ಜ್‌ನಲ್ಲಿ ರೂಮ್ ಮಾಡಿರುವ ಪ್ರಕರಣ ಬಯಲಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ತರೀಕೆರೆಯವಳಾಗಿದ್ದು, ನಗರದ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಯುವಕ ಕುದ್ರೋಳಿ ನಿವಾಸಿಯಾಗಿದ್ದಾನೆ. ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ವಸತಿಗೃಹವೊಂದರ ರೂಮ್‌ನಲ್ಲಿ ಇವರಿದ್ದ ಬಗ್ಗೆ ಬಂದರು ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಕೂಡಲೇ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಇಬ್ಬರು ಪ್ರತ್ಯೇಕ ರೂಮ್‌ನಲ್ಲಿದ್ದರೆಂದು ತಿಳಿದು ಬಂದಿದೆ. ಇವರಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಕಲಿ ಪಾಸ್ ಬಳಕೆ?: ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಆರೋಪಿಗಳು ತಾವು ತೆರಳುವ ಕಾರಿಗೆ ನಕಲಿ ಪಾಸ್ ಅಂಟಿಸಿ ಲಾಡ್ಜ್‌ಗೆ ತೆರಳಿದ್ದರೆಂದು ತಿಳಿದುಬಂದಿದೆ. ಈ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
from India & World News in Kannada | VK Polls https://ift.tt/3y0zA5K