ಮಂಡ್ಯದ ಹಲಗೂರು ಬಳಿ ಅಪಘಾತದಲ್ಲಿ ಹೊತ್ತಿ ಉರಿದ ಕಾರು: ತಂದೆ, ಮಗಳು, ಮಗ ಸಜೀವ ದಹನ

ಹಲಗೂರು: ಬೆಂಗಳೂರು-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿ 948 (ಹಿಂದಿನ ಸಂಖ್ಯೆ 209)ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕೆ ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸಜೀವ ದಹನಗೊಂಡರು. ರಾಷ್ಟ್ರೀಯ ಹೆದ್ದಾರಿ ಸಾಗುವ ಜಿಲ್ಲೆ ಮಳವಳ್ಳಿ ತಾಲೂಕಿನ ಬಳಿ ಶುಕ್ರವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ತಂದೆ ಶೇಖ್‌ ಫೈಸಲ್‌ (44), ಮಗಳು ಸುಹಾನಾ (11), ಮಗ ಶೇಖ್‌ ಆಯಿಲ್‌ (6) ಮೃತರು. ಇವರ ಪತ್ನಿ ಮೆಹೆಕ್‌ (33), ಮಗಳು ಮೆಹೆರಾ ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ನಿವಾಸಿಗಳಾದ ಇವರು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಗ ಹಲ ಗೂರು ಗೌರಿಶಂಕರ ಕಲ್ಯಾಣ ಮಂಟಪದ ಬಳಿ ಘಟನೆ ನಡೆದಿದೆ. ಈ ಕುಟುಂಬ ಬೆಂಗಳೂರಿನ ಸರ್ಜಾಪುರದಲ್ಲಿ ವಾಸಮಾಡುತ್ತಿತ್ತು. ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿ ಕೊಂಡಾಗ ಕಾರಿನಿಂದ ಹೊರ ಬರಲಾಗದೆ ಮೂವರೂ ಕಾರಿನಲ್ಲೇ ಸಜೀವ ದಹನವಾಗಿ ದ್ದಾರೆ. ಇಬ್ಬರು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯ ಅಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/3vOBm9j

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...