ಬೆಂಗಳೂರು: ಜೂನ್ 7 ರ ಬಳಿಕ ರಾಜ್ಯದಲ್ಲಿ ವಿಸ್ತರಣೆ ಮಾಡಬೇಕೋ ಬೇಡವೋ ಎಂಬ ನಿಟ್ಟಿನಲ್ಲಿ ಚರ್ಚೆ ನಡೆಸಿ ನಿರ್ಧಾರವನ್ನು ಕೈಗೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಬುಧವಾರ ನುರಿತ ವೈದ್ಯರು, ತಜ್ಞರು ಹಾಗೂ ಸಚಿವರ ಸಭೆಯನ್ನು ಕರೆದಿದ್ದಾರೆ. ಬುಧವಾರ ಸಂಜೆ 4.30 ಕ್ಕೆ ನುರಿತ ವೈದ್ಯರು ಹಾಗೂ ತಜ್ಞರ ಜೊತೆ ಸಭೆ ನಡೆಯಲಿದೆ. ಇದಾದ ಬಳಿಕ ಸಂಜೆ 6 ಗಂಟೆಗೆ ಕಾವೇರಿ ನಿವಾಸದಲ್ಲಿ ಸಚಿವರ ಜೊತೆಗೆ ವಿಚಾರ ವಿನಿಮಯ ಹಾಗೂ ಚರ್ಚೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ನಡೆಸಲಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆಯ ಬಗ್ಗೆ ಸರ್ಕಾರದಲ್ಲಿ ಭಿನ್ನ ಅಭಿಪ್ರಾಯಗಳಿವೆ. ಕೆಲವು ಸಚಿವರು ಲಾಕ್‌ಡೌನ್ ಒಂದು ವಾರಗಳ ಕಾಲ ವಿಸ್ತರಣೆ ಮಾಡಲು ಒಲವು ತೋರಿಸಿದರೆ ಮತ್ತೆ ಕೆಲವರು ಬೇಡ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸಚಿವರು ಹಾಗೂ ಕೋವಿಡ್ ಟಾಸ್ಕ್ ಫೋರ್ಸ್ ಅಧ್ಯಕ್ಷರು ಆಗಿರುವ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಲಾಕ್‌ಡೌನ್ ಬೇಡ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿದ್ದಾರೆ. ಅಲ್ಲದೆ ಎಸ್ ಟಿ ಸೋಮಶೇಖರ್ ಕೂಡಾ ಅನ್‌ಲಾಕ್ ಪ್ರಕ್ರಿಯೆ ಮಾಡುವುದು ಒಲಿತು ಎಂದಿದ್ದಾರೆ. ಇನ್ನು ಡಿಸಿಎಂ ಲಕ್ಷ್ಮಣ ಸವದಿ ಕೂಡಾ ಹಂತ ಹಂತವಾಗಿ ಅನ್‌ಲಾಕ್ ಮಾಡುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಬುಧವಾರ ಸಂಜೆ ತಜ್ಞರ ಜೊತೆಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಪ್ರಮುಖರು ಭಾಗಿಯಾಗಲಿದ್ದಾರೆ. ಆದರೆ ತಾಂತ್ರಿಕ ಸಲಹಾ ಸಮಿತಿ ಒಂದು ವಾರಗಳ ಕಾಲ ಲಾಕ್‌ಡೌನ್‌ಗೆ ಸಲಹೆ ನೀಡಿದೆ. ಈ ಮೂಲಕ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯ ಎಂಬುವುದು ತಾಂತ್ರಿಕ ಸಲಹಾ ಸಮಿತಿಯ ವಾದವಾಗಿದೆ. ಆದರೆ ಆರ್ಥಿಕ ದೃಷ್ಟಿಯಿಂದ ಲಾಕ್‌ಡೌನ್ ವಿಸ್ತರಣೆ ದುಬಾರಿಯಾಗಲಿದೆ. ಈ ನಿಟ್ಟಿನಲ್ಲಿ ಬುಧವಾರ ನಡೆಯಲಿರುವ ಸಭೆ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಈ ಸಭೆಯಲ್ಲಿ ಲಾಕ್‌ಡೌನ್ ಭವಿಷ್ಯ ನಿರ್ಧಾರವಾಗಲಿದೆ.
from India & World News in Kannada | VK Polls https://ift.tt/3yVoVKR