ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಹೊಸದಾಗಿ ನೇಮಕಗೊಂಡಿರುವ ವೈದ್ಯರ ಜೊತೆಗೆ ಆರೋಗ್ಯ ಸಚಿವ ಡಾ. ಸಂವಾದ ನಡೆಸುವ ಮೂಲಕ ವೃತ್ತಿ ಘನತೆ ಎತ್ತಿ ಹಿಡಿಯುವಂತೆ ಮನವಿ ಮಾಡಿಕೊಂಡರು. ಆರೋಗ್ಯ ಇಲಾಖೆ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಚಿವ ಡಾ. ಕೆ. ಸುಧಾಕರ್, ಹೊಸದಾಗಿ ನೇಮಕಗೊಂಡಿರುವ 715 ಹಿರಿಯ ತಜ್ಞರು ಮತ್ತು 1,048 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಇಲಾಖೆಗೆ ಸ್ವಾಗತಿಸಿದರು. ರಾಜ್ಯಾದ್ಯಂತ ಖಾಲಿ ಇರುವ ಹುದ್ದೆಗಳಿಗೆ ನೇಮಕಗೊಳ್ಳುತ್ತಿರುವ ತಜ್ಞರು, ವೈದ್ಯರಲ್ಲದೆ ಇಲಾಖೆಯ ಹಿರಿಯ ಅಧಿಕಾರಿಗಳು, ಎಲ್ಲಾ ಜಿಲ್ಲೆಗಳ ಡಿಎಚ್ ಒ, ಟಿಎಚ್ ಒ ಗಳು ವರ್ಚುವಲ್ ವೇದಿಕೆ ಮೂಲಕ ಈ ವಿಶೇಷ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಭಾಷಣದಲ್ಲಿ ಹೊಸದಾಗಿ ನೇಮಕಗೊಂಡ ಎಲ್ಲರಿಗೂ ವೃತ್ತಿ ಘನತೆ ಎತ್ತಿ ಹಿಡಿಯುವಂತೆ ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸಲು ಸಚಿವ ಸುಧಾಕರ್ ಕರೆ ನೀಡಿದರು. ಕೋವಿಡ್ 3 ನೇ ಅಲೆಯ ಹಿನ್ನೆಲೆಯಲ್ಲಿ ವೈದ್ಯರ ಕೊರತೆ ಉಂಟಾಗದಂತೆ ಸರ್ಕಾರ ದೊಡ್ಡ ಸಂಖ್ಯೆಯಲ್ಲಿ ವೈದ್ಯರನ್ನು ನೇರ ನೇಮಕಾತಿ ಮಾಡಿಕೊಂಡಿದೆ. ಈ ಮೂಲಕ ತಾಲ್ಲೂಕು, ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಈ ವೈದ್ಯರನ್ನು ಬಳಸಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿಸ್ವತಃ ಸಚಿವರೇ ಸ್ವತಃ ಹೊಸತಾಗಿ ನೇಮಕಗೊಂಡಿರುವ ವೈದ್ಯರನ್ನು ಉದ್ದೇಶಿಸಿ ಮಾತನಾಡುವ ಮೂಲಕ ಕೋವಿಡ್ ಸಂಕಷ್ಟದ ಅವಧಿಯಲ್ಲಿ ಶಕ್ತಿ ಮೀರಿ ಕೆಲಸ ಮಾಡುವಂತೆ ಮನವಿ ಮಾಡಿಕೊಂಡರು.
from India & World News in Kannada | VK Polls https://ift.tt/3caHW29