ಸಿದ್ದರಾಮಯ್ಯಗೆ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರವೇ ಇಲ್ಲ, ಇಂತಹ ಪರಿಸ್ಥಿತಿ ಬರಬಾರದು! ಎಚ್‌. ವಿಶ್ವನಾಥ್ ವ್ಯಂಗ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರವೇ ಇಲ್ಲದಂತಾಗಿದೆ. ಒಬ್ಬ ಮಾಜಿ ಸಿಎಂ ಆದವರು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಇಂತಹ ಪರಿಸ್ಥಿತಿ ಬರಬಾರದು ಎಂದು ವಿಧಾನಪರಿಷತ್ ಸದಸ್ಯ ಎಚ್‌. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಶಿಷ್ಯಂದಿರು ಎಲ್ಲವನ್ನೂ ಮಾತಾಡ್ತಾರೆ, ಶಿಷ್ಯಂದಿರು ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋದರೆ 150 ಸೀಟು ಬರುತ್ತದೆ ಅನ್ನುತ್ತಾರೆ. ಆದರೆ ಸಿದ್ದರಾಮಯ್ಯ ಸಿಎಂ ಆದಾಗಲೇ ಯಾಕೆ ಕಾಂಗ್ರೆಸ್ 70 ಕ್ಕೆ ಬಂದು ನಿಂತಿದ್ದು? ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಅವರೇ ಸಿಎಂ ಅನ್ನೋದಕ್ಕೆ ಟೂ ಅರ್ಲಿ ಇದು. ಸಿಎಂ ಸ್ಥಾನ ಪತ್ರಾವಳಿ ಅಲ್ಲ, ಸಿಎಂ ಸ್ಥಾನ ಉಂಡು ಬಿಸಾಡೋದಲ್ಲ. ಅದನ್ನು ಸ್ವಚ್ಛವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು. ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದು ಸಿಎಂ ಅವಕಾಶ ಕೊಟ್ಟಾಗಿದೆ. ಡಿಕೆ ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು, ಅವರಿಗೆ ಅವಕಾಶ ಸಿಗಬೇಕು ಎಂದರು. ಒಂದು ಸಲ ಸಿದ್ದರಾಮಯ್ಯಗೆ ಅವಕಾಶ ಸಿಕ್ಕಾಗಿದೆ. ಈಗ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ, ಪರಮೇಶ್ವರ್ ಇದ್ದಾರೆ ಎಂದ ಅವರು ಜಮೀರ್ ಅಹ್ಮದ್ ಖಾನ್ ಮುಂದಿಟ್ಟುಕೊಂಡು ಹೋಗಬೇಡಿ ಸಿದ್ದರಾಮಯ್ಯನವರೇ, ಒಳ್ಳೆದಾಗಲ್ಲ ಎಂದು ಸಲಹೆ ನೀಡಿದರು. ಇದೇ ವೇಳೆ ರಮೇಶ್ ಜಾರಕಿಹೊಳಿ ರಾಜಕೀಯ ತಂತ್ರಗಾರಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾನೂನು ವಿಚಾರದಲ್ಲಿ ಬೇರೆಯವರು ಏನೂ ಹೇಳೋದಕ್ಕಾಗಲ್ಲ, ಅವರು ಸಿಡಿ ಕೇಸ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದು ದುರಾದೃಷ್ಟ. ಅವರೇ ಸಿಕ್ಕಿಹಾಕಿಕೊಂಡರೋ ಬೇರೆಯವರು ಸಿಕ್ಕಿಸಿ ಹಾಕಿದ್ರೋ ಗೊತ್ತಿಲ್ಲ. ಆದರೆ ಅವರ ರಾಜಕೀಯ ನಿರ್ಧಾರದಲ್ಲಿ ಕಾನೂನು ವಿಚಾರದಲ್ಲಿ ಎಲ್ಲರೂ ಮಾತನಾಡುವುದಕ್ಕೆ ಆಗುವುದಿಲ್ಲ. ಬಿಜೆಪಿ ಹೈಕಮಾಂಡ್ ಮುಂದೆ ನಮ್ಮ ಎಲ್ಲ ವಿಚಾರ ಹೇಳಲಾಗಿದೆ. ಅವರು ನಿರ್ಧಾರ ತೆಗೆದುಕೊಳ್ಳೋದು ಅವರಿಗೆ ಬಿಟ್ಟಿದ್ದು ಎಂದರು.


from India & World News in Kannada | VK Polls https://ift.tt/3xJaM1Y

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...