ಐಎಎಸ್‌ ಅಧಿಕಾರಿ ದೀಪಾ ಚೋಳನ್‌ ತಂದೆ-ತಾಯಿ ಕೋವಿಡ್‌ಗೆ ಬಲಿ

ಬೆಂಗಳೂರು: ಅವರ ತಂದೆ, ತಾಯಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಬ್ಬರನ್ನೂ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ 10 ದಿನಗಳ ಅಂತರದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ದೀಪಾ ಚೋಳನ್‌ ಅವರು ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಅವರ ಪತ್ನಿ. ನಗರದ ಕೋವಿಡ್‌ ನಿರ್ವಹಣೆಯ ಹೊಣೆ ಹೊತ್ತಿರುವ ರಾಜೇಂದ್ರ ಚೋಳನ್‌ ಅವರಿಗೆ ಅತ್ತೆ, ಮಾವನ ಅಂತ್ಯಸಂಸ್ಕಾರದಲ್ಲೂ ಭಾಗಿಯಾಗಲು ಸಾಧ್ಯವಾಗಿಲ್ಲ. ದೀಪಾ ಚೋಳನ್ ಮತ್ತು ರಾಜೇಂದ್ರ ಚೋಳನ್ ಕೊರೊನಾ ವಿರುದ್ಧ ಹಗಲು ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಮಹಾಮಾರಿ ಕೊರೊನಾದಿಂದ ದೀಪಾ ಚೋಳನ್ ತನ್ನ ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ. ದೀಪಾ ಮೇ 26 ರಂದು ತಂದೆಯನ್ನು ಕಳೆದುಕೊಂಡಿದ್ದರೆ, ಎರಡು ವಾರದ ಮುಂಚೆ ತಾಯಿ ನಿಧನರಾಗಿದ್ದರು. ರಾಜೇಂದ್ರ ಚೋಳನ್ ತಂದೆ ತಾಯಿಗೂ ಇದೀಗ ಕೊವಿಡ್ ಧೃಡಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ತವ್ಯದಲ್ಲಿರುವ ಕಾರಣ ರಾಜೇಂದ್ರ ಚೋಳನ್ಗೆ ಊರಿಗೆ ಹೋಗಲು ಸಾಧ್ಯವಾಗುತ್ತಿಲ್ಲ.


from India & World News in Kannada | VK Polls https://ift.tt/3c775e0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...