: ಮುಂದಿನ ಸಿಎಂ ಆಗಬೇಕು ಎಂಬ ಕೂಗು ಕಾಂಗ್ರೆಸ್‌ನಲ್ಲಿ ಮತ್ತಷ್ಟು ತೀವ್ರಗೊಂಡಿದೆ. ಈ ಬೇಡಿಕೆಗೆ ಇದೀಗ ಮತ್ತೋರ್ವ ಶಾಸಕ ದನಿಗೂಡಿಸಿದ್ದಾರೆ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹಮದ್, ಕಂಪ್ಲಿ ಶಾಸಕ ಗಣೇಶ್ ಅವರು ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಬ್ಯಾಟಿಂಗ್ ಬೀಸಿದ್ದರು. ಇದೀಗ ಅವರ ಸಾಲಿಗೆ ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಸೇರ್ಪಡೆಯಾಗಿದ್ದಾರೆ. ಸಿದ್ದರಾಮಯ್ಯ ನಿವಾಸಕ್ಕೆ ಬುಧವಾರ ಬೆಳಗ್ಗೆ ಆಗಮಿಸಿದ್ದ ಶಾಸಕ ಮಾಧ್ಯಮಗಳಿಗೆ ಮಾತನಾಡಿ, ಮುಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು. ರಾಜ್ಯದ ಜನರ ಅಭಿಪ್ರಾಯ ಇದೇ ಆಗಿದೆ. ನಮ್ಮ ಶಾಸಕರ ಅಭಿಪ್ರಾಯವೂ ಇದೇ ಆಗಿದೆ. ಡಿ.ಕೆ.ಶಿವಕುಮಾರ್ ಅವರಿಗೆ ಇನ್ನೂ ವಯಸ್ಸಿದೆ. ಅವರು ಮುಂದೆ ಬೇಕಾದರೆ ಸಿಎಂ ಆಗಬಹುದು. 2023ಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕು. ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅದಕ್ಕೆ ಅವರೇ ಆದರೆ ಒಳ್ಳೆಯದು ಎಂಬುದು ನಮ್ಮ ಆಸೆ. ಇದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಹೇಳಿದರು. ಇನ್ನು ಶಾಸಕರ ಬೇಡಿಕೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ಮುಂದಿನ ಸಿಎಂ ಅಂತ ಶಾಸಕರುಗಳು ಹೇಳಿದರೆ ನಾನೇನು ಮಾಡೋಕೆ ಆಗಲ್ಲ. ಅದಕ್ಕೂ ನನಗೆ ಸಂಬಂಧ ಇಲ್ಲ ಎಂದು ಹೇಳಿ ತೆರಳಿದ್ದರು. ಈಗಾಗಲೇ ದಿಲ್ಲಿಯಲ್ಲಿ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಂದಿನ ಸಿಎಂ ವಿಚಾರದಲ್ಲಿ ಯಾವುದೇ ನಾಯಕರು ತಮ್ಮ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ. ಅಲ್ಲದೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡಾ ಸಿಎಂ ಯಾರು ಎಂದು ಹೇಳಿಕೆ ಕೊಟ್ಟ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಧ್ಯೆ ರಾಮಪ್ಪ, ಅಖಂಡ ಶ್ರೀನಿವಾಸ್ ಮೂರ್ತಿ ಹೈಕಮಾಂಡ್ ಹೇಳಿದ್ರೂ ಡೋಂಟ್ ಕೇರ್ ಅಂತ ತಮ್ಮ ಹೇಳಿಕೆ ನೀಡಿದ್ದಾರೆ.
from India & World News in Kannada | VK Polls https://ift.tt/3qoqBbN