ಸಿದ್ದರಾಮಯ್ಯ v/s ಡಿಕೆಶಿ: ನಂಬರ್ ಗೇಮ್‌ನಲ್ಲಿ ಸಿದ್ದರಾಮಯ್ಯ ಕೈ ಮೇಲು!

ಬೆಂಗಳೂರು: ಕಾಂಗ್ರೆಸ್‌ನಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಸಿಎಂ ಸ್ಥಾನಕ್ಕಾಗಿ ತಿಕ್ಕಾಟ ತೀವ್ರಗೊಂಡಿದೆ. ಈ ನಡುವೆ ಸಿದ್ದರಾಮಯ್ಯ ಅವರ ಪರವಾಗಿ 10 ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ದು ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಎಂದು ಘೋಷಣೆ ಮಾಡಿಬಿಟ್ಟಿದ್ದಾರೆ. ಕಾಂಗ್ರೆಸ್ ಮೂಲಗಳ ಮಾಹಿತಿ ಪ್ರಕಾರ ಸುಮಾರು 50 ಕ್ಕೂ ಅಧಿಕ ಶಾಸಕರು ಸಿದ್ದರಾಮಯ್ಯ ನಾಯಕತ್ವದ ಮೇಲೆ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಶಾಸಕರಾದ ಜಮೀರ್ ಅಹ್ಮದ್ ಖಾನ್, ತುಕರಾಮ್, ಭೀಮಾ ನಾಯ್ಕ್, ಬಸವರಾಜ ರಾಯರೆಡ್ಡಿ, ಆರ್. ರಾಮಪ್ಪ, ಕಂಪ್ಲಿ ಗಣೇಶ್, ರಾಘವೇಂದ್ರ ಹಿಟ್ನಾಳ್, ಅಖಂಡ ಶ್ರೀನಿವಾಸ್‌ ಮೂರ್ತಿ ಸಿದ್ದರಾಮಯ್ಯ ಅವರ ಪರವಾಗಿ ಧ್ವನಿ ಎತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಆಗಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋದರೆ 130 - 150 ಸ್ಥಾನ ಗಳಿಸುವುದು ಪಕ್ಕಾ ಎಂದು ಅಖಂಡ ಶ್ರೀನಿವಾಸ್ ಮೂರ್ತಿ ಭವಿಷ್ಯ ನುಡಿದಿದ್ದಾರೆ. ಹೀಗೆ ಸಿದ್ದರಾಮಯ್ಯ ಅವರ ಆಪ್ತ ಶಾಸಕರು ಹೈಕಮಾಂಡ್ ಸೂಚನೆಯನ್ನು ಮೀರಿ ಬಹಿರಂಗ ಹೇಳಿಕೆಯನ್ನು ನೀಡಿದರೆ ಆಂತರಿಕವಾಗಿ ಸಿದ್ದರಾಮಯ್ಯ ನಾಯಕತ್ವದ ಪರವಾಗಿ ಸುಮಾರು 50 ಕ್ಕೂ ಅಧಿಕ ಶಾಸಕರು ಇದ್ದಾರೆ ಎಂದು ತಿಳಿದುಬಂದಿದೆ. ಪಕ್ಷದ ಸೂಚನೆಯ ಹಿನ್ನೆಲೆಯಲ್ಲಿ ಇವರು ಬಹಿರಂಗವಾಗಿ ಹೇಳಿಕೆಯನ್ನು ನೀಡುತ್ತಿಲ್ಲ. ಆದರೆ ಡಿಕೆ ಶಿವಕುಮಾರ್ ಗಿಂತ ಸಿದ್ದರಾಮಯ್ಯ ಅವರ ನಾಯಕತ್ವ ಕಾಂಗ್ರೆಸ್‌ಗೆ ಅಗತ್ಯವಿದೆ ಎಂಬುವುದು ಇವರ ಅಭಿಪ್ರಾಯವಾಗಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರ ಪರವಾಗಿ ಶಾಸಕರು ಬಹಿರಂಗ ಹೇಳಿಕೆ ನೀಡಿದರೆ ಡಿಕೆ ಶಿವಕುಮಾರ್ ಅವರ ಪರವಾಗಿ ಇದುವರೆಗೂ ಯಾರೂ ಹೇಳಿಕೆ ನೀಡಿಲ್ಲ. ಸಹಜವಾಗಿ ಇದು ಕುತೂಹಲ ಕೆರಳಿಸಿದೆ. ಆದರೆ ಸದ್ಯ ಯಾರೂ ಇಂತಹ ಹೇಳಿಕೆ ಕೊಡಬಾರದು ಎಂದು ಹಿರಿಯರು ಅಭಿಪ್ರಾಯ ಪಟ್ಟಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್‌ನಲ್ಲಿ ಚುನಾವಣೆಗೆ ಇನ್ನು ಎರಡು ವರ್ಷ ಇರುವಾಗಲೇ ಸಿಎಂ ಪಟ್ಟಕ್ಕಾಗಿ ತಯಾರಿ ಶುರುವಾಗಿದೆ. ಸದ್ಯ ಸಿದ್ದರಾಮಯ್ಯ ಅವರ ಪರವಾಗಿರುವ ನಂಬರ್‌ ಮುಂದಿನ ದಿನಗಳಲ್ಲಿ ಯಾರ ಪರವಾಗಲಿದೆ ಎಂಬುವುದು ಕೂಡಾ ಸದ್ಯದ ಕುತೂಹಲವಾಗಿದೆ. ಆದರೆ ಪಕ್ಷದ ಹೈಕಮಾಂಡ್‌ ಮಾತ್ರ ಸದ್ಯ ಯಾರೂ ಬಹಿರಂಗ ಹೇಳಿಕೆ ಕೊಡಬಾರದು. ಬದಲಾಗಿ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂಬ ಸೂಚನೆಯನ್ನು ನೀಡಿದೆ.


from India & World News in Kannada | VK Polls https://ift.tt/3xJWTk7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...