ಜೂನ್‌ ತಿಂಗಳಲ್ಲಿ ವಾಡಕೆಗಿಂತ ಶೇ.12ರಷ್ಟು ಹೆಚ್ಚು ಮಳೆ: ಕೊಪ್ಪಳದಲ್ಲಿ ಅತಿವೃಷ್ಟಿ

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕಡಿಮೆಯಾಗಿದೆ. ದಕ್ಷಿಣದ ಒಳನಾಡು ಪ್ರದೇಶಗಳಲ್ಲಿ ಈಗಾಗಲೇ 15 ದಿನಗಳಿಂದ ಇಲ್ಲವಾಗಿದೆ. ಹೀಗಿದ್ದರೂ ಜೂನ್‌ ತಿಂಗಳ ಸರಾಸರಿ ಮಳೆ ಪ್ರಮಾಣ ವಾಡಿಕೆಗಿಂತ ಶೇ.12ರಷ್ಟು ಹೆಚ್ಚಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಜೂನ್‌ ತಿಂಗಳಲ್ಲಿ ರಾಜ್ಯದಲ್ಲಿ ಒಟ್ಟು 223.3 ಮಿಲಿಮೀಟರ್‌ನಷ್ಟು ಮಳೆಯಾಗಿದೆ. ಸಾಮಾನ್ಯವಾಗಿ ಜೂನ್‌ ತಿಂಗಳಲ್ಲಿ ಸರಾಸರಿ 199.3ರಷ್ಟು ಮಳೆಯಾಗುತ್ತದೆ. ರಾಜ್ಯದ ಉಪವಲಗಳಲ್ಲಿ ಬಿದ್ದಿರುವ ಮಳೆ ಪ್ರಮಾಣಗಳಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ. ಕೆಲವೆಡೆ ತೀವ್ರ ಮಳೆ ಕೊರೆತೆಯಾಗಿದ್ದು, ಕೃಷಿ ಕಾರ್ಯಕ್ಕೆ ತೊಂದರೆಯಾಗಿದೆ. ಮತ್ತೆ ಕೆಲವೆಡೆ ಅತಿವೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ವಾಡಿಕೆಗಿಂತ ಶೇ.11ರಷ್ಟು ಮಳೆಕೊರತೆಯಾಗಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.1ರಷ್ಟು ಹೆಚ್ಚು ಮಳೆಯಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಉತ್ತರ ಒಳನಾಡು ಪ್ರದೇಶಗಳಲ್ಲಿ ವಾಡಿಕೆಗಿಂತ ಶೇ.50ರಷ್ಟು ಹೆಚ್ಚು ಮಳೆಯಾಗಿದೆ. ( ಈ ಪ್ರದೇಶದಲ್ಲಿ ಜೂನ್‌ ತಿಂಗಳಲ್ಲಿ ಸಾಮಾನ್ಯವಾಗಿ 107.1ಮಿಮೀ ಮಳೆಯಾಗುತ್ತಿದೆ. ಆದರೆ, ಈ ಬಾರಿ 161 ಮಿಮೀ ಮಳೆಯಾಗಿದೆ). ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಶೇ.3ರಷ್ಟು ಮಳೆ ಕೊರತೆಯಾಗಿದೆ. ಕೊಪ್ಪಳದಲ್ಲಿ ಶೇ.112ರಷ್ಟು ಹೆಚ್ಚು ಮಳೆ ಸುರಿದಿದ್ದು, ಜೂನ್‌ ತಿಂಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಬಿದ್ದಿರುವ ಪ್ರದೇಶ ಎನಿಸಿದೆ. ದಕ್ಷಿಣ ಒಳನಾಡು ಪ್ರದೇಶಗಳು ಕೂಡ ವಾಡಿಕೆಗಿಂತ ಶೇ.15ರಷ್ಟು ಹೆಚ್ಚು ಮಳೆ ಪಡೆದಿವೆ. ಆದರೆ, ಕೊಡಗು, ಮೈಸೂರು, ರಾಮನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ. ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳು ಅತಿ ಹೆಚ್ಚು ಮಳೆ ಪಡೆದಿವೆ.


from India & World News in Kannada | VK Polls https://ift.tt/367Vbxf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...