ಬೆಂಗಳೂರು: ನನಗೆ ದಿಲ್ಲಿಯಿಂದ ಯಾವುದೇ ಒತ್ತಡ ಇರಲಿಲ್ಲ. ಎರಡು ತಿಂಗಳ ಹಿಂದೆಯೇ ನಾನೇ ರಾಜೀನಾಮೆ ನೀಡಲು ಉದ್ದೇಶಿಸಿದ್ದೆ. ಆದರೆ ಸರಕಾರಕ್ಕೆ ಎರಡು ವರ್ಷ ತುಂಬಿದ ಶುಭ ಸಂದರ್ಭದಲ್ಲಿ ರಾಜೀನಾಮೆ ನೀಡುವುದು ಸರಿ ಎಂದು ಈ ದಿನವನ್ನು ಆಯ್ಕೆ ಮಾಡಿಕೊಂಡೆ ಎಂದು ಹೇಳಿದ್ದಾರೆ. ಸೋಮವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದ ಬಳಿಕ ಮಾತನಾಡಿದ ಅವರು, ಬೇರೆಯವರಿಗೂ ಅವಕಾಶ ಸಿಗಬೇಕು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. 75 ವರ್ಷ ದಾಟಿದ್ದೇನೆ ಎಂದು ಅಧಿಕಾರದಿಂದ ಇಳಿಯುವಂತೆ ಕೇಂದ್ರ ನಾಯಕರು ನನಗೆ ಹೇಳಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಮೋದಿ ಆಗಲೀ, ಯಾರದ್ದೂ ಒತ್ತಾಯ ಇರಲಿಲ್ಲ. ನಾನೇ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದೇನೆ ಎಂದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. 75 ವರ್ಷ ದಾಟಿದ ಯಾರಿಗೂ ಯಾವುದೇ ಹುದ್ದೆಯ ಸ್ಥಾನಮಾನ ನೀಡಿಲ್ಲ. ಆದರೆ ಯಡಿಯೂರಪ್ಪ ಕುರಿತು ಅಭಿಮಾನ ಇಟ್ಟು ರಾಷ್ಟ್ರ ನಾಯಕರು ನನಗೆ ಮುಂದುವರಿಯಲು ಅವಕಾಶ ನೀಡಿದ್ದಾರೆ. ನನ್ನ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿಕೊಂಡು ಪ್ರೀತಿಯಿಂದ ಕಳುಹಿಸಿದ್ದಾರೆ ಎಂದರು. ಮುಂದಿನ ಯಾರಾಗಬೇಕು ಎಂದು ಯಾವುದೇ ಹೆಸರು ಪ್ರಸ್ತಾಪ ಮಾಡಿಲ್ಲ. ಮುಂದೆ ಸಿಎಂ ಯಾರಾಗಬೇಕು ಎಂದು ಹೈಕಮಾಂಡ್ ನಿರ್ಧರಿಸಲಿದೆ. ಈ ವಿಚಾರವಾಗಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ. ಮುಂದೆ ಬರುವ ಮುಖ್ಯಮಂತ್ರಿಗೂ ಎಲ್ಲ ರೀತಿಯ ಸಹಕಾರ ಇರಲಿದೆ. ವಲಸಿಗ ಸಚಿವರೂ ಇದೇ ರೀತಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.
from India & World News in Kannada | VK Polls https://ift.tt/3y9LScy