ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ 3.0 ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಜಾರಿಯಲ್ಲಿರುವ ಲಾಕ್‌ಡೌನ್ ಅವಧಿ ಜುಲೈ 5 ಕ್ಕೆ ಮುಕ್ತಾಯಗೊಳ್ಳಲಿದ್ದು ಲಾಕ್‌ಡೌನ್‌ನನ್ನು ಮತ್ತಷ್ಟು ಸಡಿಲಿಕೆ ಮಾಡುವ ನಿಟ್ಟಿನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಕ್ರಮ ಕೈಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಅನ್‌ಲಾಕ್ 3.0 ಅನ್‌ಲಾಕ್ 2.0 ನಲ್ಲಿ ಸಂಜೆ 5 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಅಲ್ಲದೆ ಹೋಟೆಲ್, ರೆಸ್ಟೋರೆಂಟ್‌ಗಳಲ್ಲೂ ಆಹಾರ ಸೇವಿಸಲು ಅವಕಾಶ ಕಲ್ಪಿಸಲಾಗಿದೆ. ಇದೀಗ ಅನ್‌ಲಾಕ್ 3.0 ಜಾರಿಗೊಂಡರೆ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಕೆ ಮಾಡುವ ನಿರೀಕ್ಷೆ ಇದೆ. ಸಂಜೆ 5 ಗಂಟೆಯ ವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ನೀಡಿರುವ ಅವಕಾಶವನ್ನು 7 ಗಂಟೆಯ ವರೆಗೆ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಮಾಲ್, ಸಿನಿಮಾ ಮಂದಿರ ತೆರೆಯಲು ಅವಕಾಶ? ಇನ್ನು ಮಾಲ್‌ಗಳನ್ನು ತೆರೆಯಲು ಅವಕಾಶ ನೀಡಬೇಕು ಎಂಬ ಮನವಿಯ ಹಿನ್ನೆಲೆಯಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದೆ. ಆದರೆ ಶೇ. 50 ಗ್ರಾಹಕರಿಗೆ ಮಾತ್ರ ಅನುಮತಿ ನೀಡುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಸಿನಿಮಾ ಮಂದಿರಗಳಿಗೂ ಕಡಿಮೆ ಪ್ರೇಕ್ಷಕರೊಂದಿಗೆ ಪ್ರಾರಂಭಿಸಲು ಅವಕಾಶನೀಡಬಹುದು ಎಂಬ ನಿರೀಕ್ಷೆ ಇದೆ. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮುಂದುವರಿಕೆ? ಅನ್‌ಲಾಕ್ 3.0 ಜಾರಿಗೊಳಿಸಿದರೂ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಮುಂದುವರಿಸುವ ಸಾಧ್ಯತೆ ಇದೆ. ಅಷ್ಟೇ ಅಲ್ಲದೆ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸದ್ಯಕ್ಕೆ ಅನುಮತಿ ನೀಡುವ ಸಾಧ್ಯತೆ ಕಡಿಮೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
from India & World News in Kannada | VK Polls https://ift.tt/368BLIw