ಭಜ್ಜಿಗೆ 41ನೇ ಹುಟ್ಟುಹಬ್ಬ: ಈತನಿಂದಲೇ ಹರಭಜನ್ ಭಾರತ ತಂಡದಿಂದ ಸ್ಥಾನ ಕಳೆದುಕೊಳ್ಳಬೇಕಾಯಿತು!

ಹೊಸದಿಲ್ಲಿ: ಭಾರತದ ಹಿರಿಯ ಆಫ್ ಸ್ಪಿನ್ನರ್‌ ಅವರು 41 ವಸಂತಕ್ಕೆ ಇಂದು(ಶನಿವಾರ) ಪದಾರ್ಪಣೆ ಮಾಡಿದ್ದಾರೆ. ಭಜ್ಜಿ ಖ್ಯಾತಿಯ ಹರಭಜನ್‌ ಸಿಂಗ್‌ ಅವರ ಹುಟ್ಟುಹಬ್ಬಕ್ಕೆ ಭಾರತದ ಹಾಲಿ ಹಾಗೂ ಮಾಜಿ ಆಟಗಾರರು ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಶುಭ ಹಾರೈಸಿದ್ದಾರೆ. 1998ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹರಭಜನ್‌ ಸಿಂಗ್, 2011ರವರೆಗೂ ಟೀಮ್‌ ಇಂಡಿಯಾದಲ್ಲಿ ನಿಯಮಿತ ಸದಸ್ಯರಾಗಿ ಆಡುತ್ತಿದ್ದರು. 2007ರ ಐಸಿಸಿ ಟಿ20 ವಿಶ್ವಕಪ್‌ ಹಾಗೂ 2011ರ ಐಸಿಸಿ ಏಕದಿನ ವಿಶ್ವಕಪ್‌ ವಿಜೇತ ಭಾರತ ತಂಡದಲ್ಲಿಯೂ ಭಜ್ಜಿ ಕಾಣಿಸಿಕೊಂಡಿದ್ದರು. ಆದರೆ, 2011ರ ಬಳಿಕ ಇಲ್ಲಿಯವರೆಗೂ ರಾಷ್ಟ್ರೀಯ ತಂಡದಲ್ಲಿ ನಿಯಮಿತವಾಗಿ ಅವರು ಕಾಣಿಸಿಕೊಳ್ಳುತ್ತಿಲ್ಲ. ಸದ್ಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 14ನೇ ಆವೃತ್ತಿಯಲ್ಲಿ ಕೋಲ್ಕತಾ ನೈಟ್‌ ರೈಡರ್ಸ್ ತಂಡಕ್ಕೆ ಅವರು ಸಹಿ ಮಾಡಿದ್ದಾರೆ. ಆದರೆ, ಅವರು ಇನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿಲ್ಲ. ಭಾರತ ತಂಡದ ಪರ ಟೆಸ್ಟ್‌ ಹಾಗೂ ಓಡಿಐನಲ್ಲಿ ಅನಿಲ್ ಕುಂಬ್ಳೆ ಅವರೊಂದಿಗೆ ಹರಭಜನ್‌ ಸಿಂಗ್‌ ಸಾಕಷ್ಟು ಪಂದ್ಯಗಳಲ್ಲಿ ಮ್ಯಾಚ್‌ ವಿನ್ನಿಂಗ್‌ ಪ್ರದರ್ಶನವನ್ನು ತೋರಿದ್ದಾರೆ. ಭಾರತದ ಪರ 103 ಟೆಸ್ಟ್ ಪಂದ್ಯಗಳಾಡಿರುವ ಹರಭಜನ್‌ ಸಿಂಗ್‌, 417 ವಿಕೆಟ್‌ಗಳು ಹಾಗೂ 236 ಓಡಿಐ ಪಂದ್ಯಗಳಿಂದ 269 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ನಾಲ್ಕು ಬಾರಿ ಐಪಿಎಲ್‌ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡದ ಸದಸ್ಯರೂ ಆಗಿರುವ ಭಜ್ಜಿ, 2011ರಲ್ಲಿ ಚಾಂಪಿಯನ್ಸ್‌ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದರು. ಟೆಸ್ಟ್ ಹ್ಯಾಟ್ರಿಕ್‌ ವಿಕೆಟ್‌ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್‌ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ 2001ರಲ್ಲಿ ನಡೆದಿದ್ದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೋಲ್ಕತಾ ಪಂದ್ಯದಲ್ಲಿ ಹರಭಜನ್‌ ಸಿಂಗ್‌ ಈ ಸಾಧನೆ ಮಾಡಿದ್ದರು. ಈ ಪಂದ್ಯದಲ್ಲಿ ವಿವಿಎಸ್‌ ಲಕ್ಷ್ಮಣ್‌ 281 ರನ್‌ ಗಳಿಸಿದ್ದು ಹಾಗೂ ಭಜ್ಜಿ ಹ್ಯಾಟ್ರಿಕ್‌ ವಿಕೆಟ್‌ ಪಡೆದಿದ್ದು ಭಾರತೀಯ ಕ್ರಿಕೆಟ್‌ನಲ್ಲಿ ಮರೆಯಲಾಗದ ಕ್ಷಣವಾಗಿದೆ. ಕೋಲ್ಕತಾದ ಈಡನ್‌ ಗಾರ್ಡನ್ಸ್ ಮೈದಾನದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌, ಆಡಮ್ ಗಿಲ್‌ಕ್ರಿಸ್ಟ್‌ ಹಾಗೂ ಶೇನ್‌ ವಾರ್ನ್‌ ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಹರಭಜನ್‌ ಸಿಂಗ್‌ ಹ್ಯಾಟ್ರಿಕ್‌ ವಿಕೆಟ್‌ ಸಾಧನೆ ಮಾಡಿದ್ದರು. ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಕೀರ್ತಿಗೆ ಹಿರಿಯ ಆಫ್‌ ಸ್ಪಿನ್ನರ್ ಅಂದು ಭಾಜನರಾಗಿದ್ದರು. ಈ ಸರಣಿಯಲ್ಲಿ ಅವರು ಒಟ್ಟು 32 ವಿಕೆಟ್‌ಗಳನ್ನು ಪಡೆದಿದ್ದರು. 400 ಟೆಸ್ಟ್‌ ವಿಕೆಟ್ ಪಡೆದ ಮೊದಲ ಭಾರತೀಯ ಆಫ್‌ ಸ್ಪಿನ್ನರ್‌ ನಂತರ 2011ರಲ್ಲಿ 400 ಟೆಸ್ಟ್‌ ವಿಕೆಟ್‌ಗಳನ್ನು ಪಡೆದ ಮೊದಲ ಭಾರತದ ಆಫ್‌ ಸ್ಪಿನ್ನರ್‌ ಎಂಬ ಕೀರ್ತಿಗೂ ಕೂಡ ಅವರು ಭಾಜನರಾಗಿದ್ದರು. ವೆಸ್ಟ್ ಇಂಡೀಸ್‌ ವಿರುದ್ಧ ನಡದಿದ್ದ ಪಂದ್ಯದಲ್ಲಿ ಅವರು ಈ ಸಾಧನೆಯನ್ನು ಮಾಡಿದ್ದರು. 2011 ನವೆಂಬರ್‌ನಲ್ಲಿ ಆರ್‌ ಅಶ್ವಿನ್‌ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಬಳಿಕ ಭಜ್ಜಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಕಳೆದುಕೊಂಡರು. ಇದುವರೆಗೂ 79 ಟೆಸ್ಟ್ ಪಂದ್ಯಗಳಾಡಿರುವ ಅಶ್ವಿನ್‌ 413 ವಿಕೆಟ್‌ಗಳನ್ನು ಪಡೆದಿದ್ದಾರೆ.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3jDwpwJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...