ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 999 ಹೆಡ್‌ಕಾನ್‌ಸ್ಟೆಬಲ್‌ಗಳ ವರ್ಗಾವಣೆ!

ಬೆಂಗಳೂರು: ನಗರದಲ್ಲಿ 999 ಹೆಡ್‌ ಕಾನ್‌ಸ್ಟೆಬಲ್‌ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಏಕಕಾಲಕ್ಕೆ ಸರಿ ಸುಮಾರು ಒಂದು ಸಾವಿರ ಮಂದಿಯನ್ನು ವರ್ಗಾವಣೆ ಮಾಡಿರುವುದು ಇದೇ ಮೊದಲು ಎಂದು ಹೇಳಲಾಗಿದೆ. ಪೊಲೀಸ್‌ ಠಾಣೆಗಳಿಗೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಒಂದೇ ಠಾಣೆಯಲ್ಲಿ ಐದು ವರ್ಷಗಳಿಗೂ ಹೆಚ್ಚು ಕಾಲ ಕರ್ತವ್ಯದಲ್ಲಿದ್ದ ಹೆಡ್‌ ಕಾನ್‌ಸ್ಟೆಬಲ್‌ಗಳ ವರ್ಗಾವಣೆ ಮಾಡಿ ಬೆಂಗಳೂರು ನಗರ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್‌ ಆದೇಶಿಸಿದ್ದಾರೆ. ಒಂದೆಡೆ ನಗರದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗಿದ್ದರೆ, ಮತ್ತೊಂದು ಕಡೆ ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಪೊಲೀಸರೇ ಅಕ್ರಮ ಚಟುವಟಿಕೆಗಳಿಗೆ ಸಾಥ್‌ ನೀಡಿ ಲಂಚ ಪಡೆಯುತ್ತಿರುವುದು ಅಲ್ಲಲ್ಲಿ ಬೆಳಕಿಗೆ ಬರುತ್ತಿವೆ. ಈ ನಡುವೆ ಕೆಲ ಪೊಲೀಸ್‌ ಠಾಣೆಗಳಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿ ಲಾಬಿ ನಡೆಸಿ 8ಕ್ಕೂ ಅಧಿಕ ವರ್ಷಗಳಿಂದ ಯಾವುದೇ ವರ್ಗಾವಣೆ ಇಲ್ಲದೆ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಇದೀಗ ವರ್ಗಾವಣೆ ಮಾಡುವ ಮೂಲಕ ಅಂಥವರಿಗೆ ಶಾಕ್‌ ನೀಡಲಾಗಿದೆ. ನಗರದ ಸಾಕಷ್ಟು ಪೊಲೀಸ್‌ ಠಾಣೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಅಪರಾಧ ಹಿನ್ನೆಲೆ ಇರುವ ವ್ಯಕ್ತಿಗಳ ಬಗ್ಗೆ ಗೊತ್ತಿದ್ದರೂ ವಿವಿಧ ಆಮಿಷಗಳಿಗೆ ಒಳಗಾಗಿ ಕ್ರಮ ಕೈಗೊಳ್ಳುತ್ತಿರಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಹೆಡ್‌ ಕಾನ್‌ಸ್ಟೆಬಲ್‌ಗಳು ಮಾತ್ರವಲ್ಲದೆ ಸಬ್‌ ಇನ್‌ಸ್ಪೆಕ್ಟರ್‌ಗಳೂ ಕೆಲ ವರ್ಷಗಳಿಂದ ಗ್ರಾಮೀಣ ಭಾಗಕ್ಕೆ ಹೋಗದೆ ನಗರದಲ್ಲೇ ಠಿಕಾಣಿ ಹೂಡಿರುವ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ. ಹಂತ-ಹಂತವಾಗಿ ವರ್ಗಾವಣೆ ಮಾಡುವ ಮೂಲಕ ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ ನಡೆಸಲು ಚಿಂತಿಸಲಾಗಿದೆ.


from India & World News in Kannada | VK Polls https://ift.tt/3BGe34G

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...