ಉತ್ತರ ಕನ್ನಡ: ಜಿಲ್ಲೆಯ ತಾಲ್ಲೂಕಿನ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಸಂಭವಿಸಿದ್ದು, ಘಟನೆಯಲ್ಲಿ ಅಪಾರ ಪ್ರಮಾಣದ ದಾಖಲಾತಿ ಕಡತಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ಶುಕ್ರವಾರ ಬೆಳಗ್ಗಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಇದರಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬೆಂಕಿಯ ಕಿಡಿ ಹೊತ್ತಿಕೊಳ್ಳುತ್ತಿದ್ದಂತೆ ಇಡೀ ಕಟ್ಟಡದಲ್ಲಿ ಬೆಂಕಿ ಹೊತ್ತಿ ಉರಿದಿದೆ. ಈ ವೇಳೆ ಕಟ್ಟಡದ ಕೋಣೆಯೊಳಗಿದ್ದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳು ಸೇರಿದಂತೆ ಪಿಠೋಪಕರಣಗಳು, ಇಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ಕಟ್ಟಡದೊಳಗಿದ್ದ ಹಲವಾರು ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಕೋಣೆಯೊಂದರಲ್ಲಿ ಹೊತ್ತಿಕೊಂಡಿದ್ದ ಬೆಂಕಿ ಕೆಲಸ ಸಮಯದ ನಂತರ ಇಡೀ ಕಟ್ಟಡವನ್ನೇ ಆವರಿಸಿದೆ. ಬಳಿಕ, ಬೆಂಕಿಯ ಕೆನ್ನಾಲಿಗೆ ಕಟ್ಟಡದ ಹೊರಗೆ ಚಾಚುತ್ತಿದ್ದಂತೆ ಸ್ಥಳೀಯರು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ. ಬಳಿಕ, ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಸಿಬ್ಬಂದಿ ಸ್ಥಳಕ್ಕೆ ಬರುವ ಅಷ್ಟರೊಳಗೆ ಬೆಂಕಿಯಿಂದ ಸಾಕಷ್ಟು ಹಾನಿಯಾಗಿತ್ತು. ಈ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಮಾಡಿ ಬೆಂಕಿಯನ್ನು ನಂದಿಸಿದ್ದು, ಹೆಚ್ಚಿನ ಅಪಾಯ ತಪ್ಪಿಸಿದ್ದಾರೆ. ಅವಘಡದ ಸುದ್ದಿ ತಿಳಿದು ಸ್ಥಳಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಗದೀಶ್ ಶಿವಪೂಜಿ, ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಬೆಂಕಿಯಿಂದಾಗಿ ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ದಾಖಲೆಗಳು ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಲಾಗಿದೆ. ಘಟನೆ ಸಂಬಂಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
from India & World News in Kannada | VK Polls https://ift.tt/3xgtLRM