ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಪ್ರತಿನಿಧಿಸಲಿರುವ ಸಾನಿಯಾ-ಅಂಕಿತಾ ಜೋಡಿ!

ಹೊಸದಿಲ್ಲಿ: ಮುಂಬರುವ 2020ರ ಟೋಕಿಯೋ ಒಲಿಂಪಿಕ್ಸ್‌ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಸ್ಟಾರ್‌ ಟೆನಿಸ್‌ ಆಟಗಾರ್ತಿ ಹಾಗೂ ಜೋಡಿ ಭಾರತವನ್ನು ಪ್ರತಿನಿಧಿಸಲಿದ್ದಾರೆಂದು ಗುರುವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ. ಟೋಕಿಯೋ 2020ರ ಕ್ರೀಡಾಕೂಟದಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತವನ್ನು ನಾಲ್ಕನೇ ಬಾರಿ ಒಲಿಂಪಿಕ್ಸ್‌ನಲ್ಲಿ ಪ್ರತಿನಿಧಿಸುವ ಭಾರತೀಯ ಮೊದಲನೇ ಟೆನಿಸ್‌ ಆಟಗಾರ್ತಿ ಎಂಬ ಸಾಧನೆಯನ್ನು ಸಾನಿಯಾ ಮಿರ್ಜಾ ಮಾಡಲಿದ್ದಾರೆ. ಜುಲೈ 23 ರಿಂದ ಆರಂಭವಾಗುತ್ತಿರುವ ಒಲಿಂಪಿಂಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿ ಭಾರತವನ್ನು ಅಕಿಂತಾ ರೈನಾ ಪ್ರತಿನಿಧಿಸಲಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಸಾನಿಯಾ ಮಿರ್ಜಾ ಹಾಗೂ ಅಂಕಿತಾ ರೈನಾ ಅವರನ್ನು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಟ್ವಿಟರ್‌ನಲ್ಲಿ ಅಭಿನಂದಿಸಿದ್ದಾರೆ. "2020ರ ಟೋಕಿಯೋ ಒಲಿಂಪಿಕ್ಸ್‌ನ ಟೆನಿಸ್‌ ಮಹಿಳೆಯರ ಡಬಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಸಾನಿಯಾ ಮಿರ್ಜಾ ಹಾಗೂ ಅಂಕಿತಾ ರೈನಾ ಅವರಿಗೆ ಅಭಿನಂದನೆ. ಇದು ಸಾನಿಯಾ ಮಿರ್ಜಾ ಪಾಲಿಗೆ ನಾಲ್ಕನೇ ಒಲಿಂಪಿಕ್ಸ್ ಕ್ರೀಡಾಕೂಟವಾಗಿದ್ದು, ಅಂಕಿತಾ ರೈನಾ ಪಾಲಿಗೆ ಇದು ಚೊಚ್ಚಲ ಒಲಿಂಪಿಕ್ಸ್ ಆಗಿದೆ. ಅವರಿಗೆ ಆಲ್‌ ದಿ ಬೆಸ್ಟ್," ಎಂದು ರಿಜಿಜು ಟ್ವೀಟ್‌ ಮಾಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಂಬಲ್ಡನ್‌ ಟೆನಿಸ್‌ ಚಾಂಪಿಯನ್‌ಷಿಪ್‌ನಲ್ಲಿ ಸಾನಿಯಾ ಮಿರ್ಜಾ ಹಾಗೂ ಅಂಕಿತಾ ರೈನಾ ಆಡುತ್ತಿದ್ದಾರೆ. ಶುಕ್ರವಾರ ಮಿಶ್ರ ಡಬಲ್ಸ್‌ನಲ್ಲಿ ಇವರಿಬ್ಬರೂ ಮುಖಾಮುಖಿಯಾಗಲಿದ್ದಾರೆ. ಸಾನಿಯಾ ಮಿರ್ಜಾ ಅವರು ರೋಹನ್‌ ಬೋಪಣ್ಣ ಅವರೊಂದಿಗೆ ಕಣಕ್ಕೆ ಇಳಿದರೆ, ಅಕಿಂತಾ ರೈನಾ, ರಾಮ್‌ಕುಮಾರ್‌ ರಾಮನಾಥನ್‌ ಅವರೊಂದಿಗೆ ಮೊದಲ ಸುತ್ತಿನ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಇನ್ನು ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಅಂಕಿತಾ ರೈನಾ ಅವರು ಅಮೆರಿಕದ ಲೌರೆನ್‌ ಡೆವಿಸ್‌ ಅವರೊಂದಿಗೆ ಆಡುತ್ತಿದ್ದಾರೆ. ಮತ್ತೊಂದೆಡೆ ಸಾನಿಯಾ ಮಿರ್ಜಾ ಅವರು ಬೆಥನಿ ಮ್ಯಾಟೆಕ್‌-ಸ್ಯಾಂಡ್ಸ್‌ ಅವರೊಂದಿಗೆ ಆಡುತ್ತಿದ್ದಾರೆ. ಸಾನಿಯಾ ಮಿರ್ಜಾ ಹಾಗೂ ಬೆಥನಿ ಮ್ಯಾಟೆಕ್‌ ಜೋಡಿ ಗುರುವಾರ ನಡೆದಿದ್ದ ಮೊದಲ ಸುತ್ತಿನ ಪಂದ್ಯದಲ್ಲಿ 7-5, 6-3 ಅಂತರದ ನೇರ ಸೆಟ್‌ಗಳಲ್ಲಿ ಗೆದ್ದು ಶುಭಾರಂಭ ಮಾಡಿತ್ತು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3jOlpwT

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...