ಮುಖ್ಯಮಂತ್ರಿ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ: ಬಿ ಸಿ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ. ಈಗಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ ಎಂದು ಮಾಜಿ ಸಚಿವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಶುಭಕೋರಿದ ಬಿ.ಸಿ.ಪಾಟೀಲ್, ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿಯೇ ಹೊಸ ಮುಖ್ಯಮಂತ್ರಿ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಬಿಜೆಪಿಯಲ್ಲಿಯೇ ಇದ್ದಾರೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನವಿದೆ. ಮುಂದೆಯೂ ಕೂಡ ಬಿಜೆಪಿಯೇ ಆಡಳಿತಕ್ಕೆ ಬರುತ್ತದೆ.ನಾವು ಮಂತ್ರಿಯಾಗಿ ಮುಂದುವರೆಯುತ್ತೇವೋ ಇಲ್ಲವೋ ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ತೀರ್ಮಾನಮಾಡುತ್ತಾರೆ ಎಂದರು. ಯಡಿಯೂರಪ್ಪನವರ ಮಾರ್ಗದರ್ಶನ ಎಲ್ಲರಿಗೂ ಇದ್ದೇ ಇರುತ್ತದೆ. ಹಾಗೆಂದ ಮಾತ್ರಕ್ಕೆ ಅದು ಶಾಡೋ ಎಂದು ಭಾವಿಸುವುದು ತಪ್ಪು.ಯಡಿಯೂರಪ್ಪ ಹಿರಿಯರು ಅನುಭವಿಗಳು ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದರಂತೆ ಅವರು ನಡೆಯುತ್ತಾರೆ. ನಾವು ಸಚಿವ ಸ್ಥಾನಕ್ಕಾಗಿ ಯಾರ ಮೇಲೂ ಒತ್ತಡ ತರುವುದಿಲ್ಲ. ಬೆಂಗಳೂರು ನಂಬಿ ಬಂದಿದ್ದೇವೆ‌.ದೆಹಲಿ ವರಿಷ್ಠರು ಆಶೀರ್ವಾದ ಮಾಡುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.


from India & World News in Kannada | VK Polls https://ift.tt/3zLKQn8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...