ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಮಾಡದಂತೆ ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಿಂದ ನಿರ್ಬಂಧ ಆದೇಶ ಪಡೆದಿದ್ದಾರೆ. ಕೆಲ ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತಪಡಿಸಿ ಡಿ.ವಿ.ಸದಾನಂದಗೌಡರು ಸಿಟಿ ಸಿವಿಲ್ ಕೋರ್ಟ್‌ನಲ್ಲಿಅರ್ಜಿ ಸಲ್ಲಿಸಿದ್ದರು. ಕಳೆದ ವಾರ ಅರ್ಜಿ ಮನವಿ ಅಲಿಸಿದ ನ್ಯಾಯಪೀಠ ನಿರ್ಬಂಧ ಆದೇಶವನ್ನು ಹೊರಡಿಸಿದೆ. ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನೆಲ್‌ಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಅಂತಹ ವಿಡಿಯೊ ಪ್ರಸಾರ ಮಾಡಿದರೆ ಘನತೆಗೆ ಧಕ್ಕೆ ಆಗಲಿದೆ ಮತ್ತು ಚಾರಿತ್ರ್ಯಹರಣವಾಗಲಿದೆ ಎಂದು ಅರ್ಜಿಯಲ್ಲಿ ಸದಾನಂದ ಗೌಡರು ಹೇಳಿದ್ದಾರೆ. ಈ ಕುರಿತು ಅರ್ಜಿಯಲ್ಲಿ, ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವಿಡಿಯೊ ಮಾಡಲಾಗಿತ್ತು ಎಂದು ಕೆಲ ಹಳೆಯ ಉದಾಹರಣೆಗಳನ್ನೂ ಅವರು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಯುವತಿ ಜತೆಗಿನ ಅಶ್ಲೀಲ ವಿಡಿಯೋ ಬಿಡುಗಡೆಗೊಂಡ ಬೆನ್ನಲ್ಲೇ ಸಚಿವ ಡಾ ಸುಧಾಕರ್ ಕೂಡ ಕೋರ್ಟ್‌ನಿಂದ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಂದಿರೋದನ್ನು ಇಲ್ಲಿ ನೆನಪಿಸಬಹುದು. ಇದೀಗ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರಿಗೂ ಈ ಭೀತಿ ಎದುರಾಗಿದೆ.
from India & World News in Kannada | VK Polls https://ift.tt/3AlWHtj